ಕೋಚ್ಚಿ: ನಾಮಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ತಪ್ಪಾಗಿ ನಮೂದಿಸಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.
ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಕಳೆದ ವರ್ಷ ನಡೆದ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಅವರ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧಿಸಿದ್ದರು. ಆಸ್ತಿ ವಿವರಗಳನ್ನು ತಪ್ಪಾಗಿ ನಮೂದಿಸಿದ್ದಾರೆ ಎಂದು ಆರೋಪಿಸಿ ನವ್ಯಾ ಅವರೇ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಆಗಸ್ಟ್‌ನಲ್ಲಿ ಈ ಅರ್ಜಿಯ ಮುಂದಿನ ವಿಚಾರಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.