ADVERTISEMENT

ಕಾಫಿಪೋಸಾ ಕಾಯ್ದೆಯಡಿ ಸ್ವಪ್ನಾ ಸುರೇಶ್‌ ಬಂಧನ ರದ್ದುಪಡಿಸಿದ ಹೈಕೋರ್ಟ್‌

ಪಿಟಿಐ
Published 8 ಅಕ್ಟೋಬರ್ 2021, 10:48 IST
Last Updated 8 ಅಕ್ಟೋಬರ್ 2021, 10:48 IST
.
.   

ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ (ಕಾಫಿಪೋಸಾ) ಕಾಯ್ದೆಯಡಿ ಬಂಧನವನ್ನು ಕೇರಳ ಹೈಕೋರ್ಟ್‌ ಶುಕ್ರವಾರ ರದ್ದುಗೊಳಿಸಿದೆ.

‘ಕಾಫಿಪೋಸಾ’ ಕಾಯ್ದೆಯಡಿ ತನ್ನ ಮಗಳ ನಿರಂತರ ಬಂಧನವನ್ನು ರದ್ದುಗೊಳಿಸುವಂತೆ ಸ್ವಪ್ನಾ ಅವರ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ. ಕೆ. ಜಯಶಂಕರನ್ ನಂಬಿಯಾರ್ ಮತ್ತು ಮೊಹಮ್ಮದ್ ನಿಯಾಸ್ ಸಿ.ಪಿ. ಅವರನ್ನೊಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠವು ಆದೇಶ ನೀಡಿದೆ.

ಆದಾಗ್ಯೂ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ದೊರೆಯದ ಕಾರಣ ಅವರು ಜೈಲಿನಲ್ಲೇ ಮುಂದುವರಿಯಲಿದ್ದಾರೆ. ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಸ್ವಪ್ನಾ ಅವರನ್ನು ಎನ್ಐಎ ಬಂಧಿಸಿದಾಗಿನಿಂದ ಅವರು ನಿರಂತರ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.