ಪ್ರಾತಿನಿಧಿಕ ಚಿತ್ರ
ತಿರುವನಂತಪುರಂ: ಕೇರಳದ ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಅಕ್ಟೋಬರ್ 15ರವರೆಗೂ ಬಿರುಗಾಳಿ ಸಹಿತ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಡುಕ್ಕಿ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಪಟ್ಟಣಂತಿಟ್ಟ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕೋಡ್, ವಯನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿತ್ತು.
ಉತ್ತರ ಕೇರಳದ ಕರಾವಳಿಗೆ ಹೊಂದಿಕೊಂಡ ಅರೇಬಿಯನ್ ಸಮುದ್ರದ ಆಗ್ನೇಯ ಭಾಗದಲ್ಲಿ ಚಂಡಮಾರುತ ಚಲನೆಯಿದ್ದು, ಗಂಟೆಗೆ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್ 15ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.