ADVERTISEMENT

ಕಾಸರಗೋಡು ಗಡಿ ಮುಕ್ತಗೊಳಿಸಲು ಕೇರಳ ಹೈಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 17:29 IST
Last Updated 1 ಏಪ್ರಿಲ್ 2020, 17:29 IST
ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್   

ಬೆಂಗಳೂರು:ರೋಗಿಗಳ ತುರ್ತು ಸೇವೆಗೆ ಸಂಚಾರ ಮುಕ್ತಗೊಳಿಸುವ ದಿಸೆಯಲ್ಲಿ ಕಾಸರಗೋಡು ವ್ಯಾಪ್ತಿಯಲ್ಲಿ ಮುಚ್ಚಲಾಗಿರುವ ಕೇರಳದ ಗಡಿ ರಸ್ತೆ ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶಿಸಿದೆ.

ಕೇರಳ-ಕರ್ನಾಟಕ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ತೆರವುಗಿಳಿಸುವಂತೆ ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ಹಾಗೂ ನ್ಯಾಯಮೂರ್ತಿ ಶಾಜಿ ಪಿ ಚಲಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಆದೇಶಿಸಿದೆ.

ಭಾರತದ ಪ್ರಜೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಮುಕ್ತವಾಗಿ ಸಂಚರಿಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಆದ್ದರಿಂದ ಬೇರೆ ವಿಧಿಯಿಲ್ಲದೆ ಈ ಆದೇಶ ಹೊರಡಿಸಬೇಕಾಗಿದೆಎಂದು ನ್ಯಾಯಪೀಠ ಹೇಳಿದೆ.

ADVERTISEMENT

ರಸ್ತೆ ಬಂದ್ ಮಾಡಿದ್ದನ್ನುಪ್ರಶ್ನಿಸಿ ಕೇರಳ ಹೈಕೋರ್ಟ್ ವಕೀಲರ ಸಂಘ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.