ADVERTISEMENT

ಕೇರಳ ಸಿಎಂ ವೇದಿಕೆಯಲ್ಲಿ ಪ್ರಾರ್ಥನಾ ಗೀತೆ ಹಾಡಿದ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಫೆಬ್ರುವರಿ 2022, 6:21 IST
Last Updated 11 ಫೆಬ್ರುವರಿ 2022, 6:21 IST
ಚಿತ್ರ ಕೃಪೆ: Twitter @VSivankuttyCPIM
ಚಿತ್ರ ಕೃಪೆ: Twitter @VSivankuttyCPIM   

ತಿರುವನಂತಪುರ: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹೈಕೋರ್ಟ್ ಮೆಟ್ಟಿಲೇರಿದೆ. ಈ ನಡುವೆ ನೆರೆಯ ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯಕ್ರಮದ ವೇದಿಕೆಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಕುರಿತು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹಾಗೂ ಸಂಸದ ಜಾನ್ ಬ್ರಿಟಾಸ್ ಟ್ವೀಟಿಸಿದ್ದು, 'ಕೇರಳ ನಮ್ಮ ಹೆಮ್ಮೆ' ಎಂದಿದ್ದಾರೆ.

ಕೇರಳ ರಾಜಧಾನಿ ತಿರುವನಂತಪುರದಲ್ಲಿ ನಡೆದ ಹೊಸ ಶಾಲಾ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಹೈಕೋರ್ಟ್ ಗುರುವಾರ ಮಧ್ಯಂತರ ಮೌಖಿಕ ಆದೇಶವನ್ನು ಹೊರಡಿಸಿದೆ. ನ್ಯಾಯಪೀಠವು ವಿಚಾರಣೆಯನ್ನು ಫೆಬ್ರುವರಿ 14ಕ್ಕೆ ಮುಂದೂಡಿದ್ದು, ಅಂತಿಮ ತೀರ್ಪು ಹೊರಬೀಳುವವರೆಗೂ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸೂಚಕ ಉಡುಪುಗಳನ್ನು ಹಾಕಿಕೊಳ್ಳಬಾರದು ಎಂದು ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.