
ಪಿಟಿಐ
ತಿರುವನಂತಪುರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಕೇರಳದ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಗುರುವಾರ ಉಚ್ಚಾಟನೆ ಮಾಡಲಾಗಿದೆ.
ತಿರುವನಂತಪುರದ ನ್ಯಾಯಾಲಯ ವೊಂದು ರಾಹುಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸುತ್ತಿ ದ್ದಂತೆಯೇ ಪಕ್ಷದ ಈ ನಿರ್ಧಾರವೂ ಹೊರಬಿದ್ದಿದೆ. ಮಹಿಳೆಯೊಬ್ಬರು ನೀಡಿದ ದೂರನ್ನು ಆಧರಿಸಿ, ಅತ್ಯಾಚಾರ ಹಾಗೂ ಬಲವಂತದ ಗರ್ಭಪಾತದ ಆರೋಪಗಳ ಮೇರೆಗೆ ರಾಹುಲ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.