ADVERTISEMENT

ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ

ಪಿಟಿಐ
Published 2 ಡಿಸೆಂಬರ್ 2025, 16:12 IST
Last Updated 2 ಡಿಸೆಂಬರ್ 2025, 16:12 IST
   

ತಿರುವನಂತಪುರ: ಈಗಾಗಲೇ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಕೇರಳದ ಪಾಲಕ್ಕಾಡ್‌ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮತ್ತೊಂದು ಅತ್ಯಾಚಾರದ ಆರೋಪ ಕೇಳಿಬಂದಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪದಲ್ಲಿರುವಾಗಲೇ ಈ ಬೆಳವಣಿಗೆ ನಡೆದಿರುವುದು ಕೇರಳದ ಕಾಂಗ್ರೆಸ್‌ ಘಟಕವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬೆಂಗಳೂರಿನ ನಿವಾಸಿಯಾಗಿರುವ 23 ವರ್ಷದ ಮಹಿಳೆ, ರಾಹುಲ್ ಮಾಂಕೂಟತ್ತಿಲ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಮುಖ್ಯಸ್ಥರಿಗೆ ಇ–ಮೇಲ್‌ ಮೂಲಕ ದೂರು ಸಲ್ಲಿಸಿದ್ದಾರೆ. 

‘ಸಾಮಾಜಿಕ ಮಾಧ್ಯಮದ ಮೂಲಕ ಪರಿಚಿತನಾಗಿದ್ದ ರಾಹುಲ್‌, ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಬೆಂಗಳೂರಿನಿಂದ ದೂರದಲ್ಲಿರುವ ಹೋಮ್‌ ಸ್ಟೇಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ’ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮಹಿಳೆ ಕಳುಹಿಸಿರುವ ಇ–ಮೇಲ್‌ ಅನ್ನು ಪೊಲೀಸರಿಗೆ ಕಳುಹಿಸಲಾಗಿದೆ ಎಂದು ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಸನ್ನಿ ಜೋಸೆಫ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಗರ್ಭಿಣಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆರೋಪವನ್ನು ರಾಹುಲ್‌ ಎದುರಿಸುತ್ತಿದ್ದಾರೆ. ಇದೇ ವಿಚಾರವಾಗಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.