ADVERTISEMENT

ರಾಜ್ಯವನ್ನು ಆರ್ಥಿಕವಾಗಿ ಹಿಂಡುತ್ತಿರುವ ಕೇಂದ್ರ ಸರ್ಕಾರ: ಪಿಣರಾಯಿ ವಿಜಯನ್‌

ಪಿಟಿಐ
Published 20 ಆಗಸ್ಟ್ 2022, 13:44 IST
Last Updated 20 ಆಗಸ್ಟ್ 2022, 13:44 IST
ಪಿಣರಾಯಿ ವಿಜಯನ್‌
ಪಿಣರಾಯಿ ವಿಜಯನ್‌   

ತಿರುವನಂತಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯವನ್ನು ಆರ್ಥಿಕವಾಗಿ ಹಿಂಡುವ ಮೂಲಕ ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಶನಿವಾರ ಆರೋಪಿಸಿದ್ದಾರೆ.

ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಾಜ್ಯದ ಅಭಿವೃದ್ಧಿಯ ಹಾದಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಿದೆ ಮತ್ತು ರಾಜ್ಯದ ಸೀಮಿತ ಹಕ್ಕುಗಳನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆ ಎಂದೂ ಹೇಳಿದ್ದಾರೆ.

ದಕ್ಷಿಣದ ರಾಜ್ಯದ ಮೇಲೆ ಕೇಂದ್ರ ಸರ್ಕಾರವು ವಿಶಿಷ್ಟ ರೀತಿಯ ಹಣಕಾಸಿನ ಒತ್ತಡವನ್ನು ಹೇರುತ್ತಿದೆ ಮತ್ತು ದೇಶದ ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಉಲ್ಲಂಘಿಸುತ್ತಿದೆ ಎಂದಿದ್ದಾರೆ.

ADVERTISEMENT

ರಾಜ್ಯಕ್ಕೆ ಲಭಿಸಬೇಕಾದ ಕಂದಾಯ ಅನುದಾನಕ್ಕೆ ಕತ್ತರಿ ಹಾಕಲಾಗಿದೆ ಮತ್ತು ಸಾಲದ ಮಿತಿಯನ್ನು ಮೊಟಕುಗೊಳಿಸುವ ಯತ್ನ ಕೂಡ ನಡೆಯುತ್ತಿದೆ ಎಂದೂ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.