ADVERTISEMENT

ಕೇರಳದಲ್ಲಿ ಅಧಿಕಾರಕ್ಕೆ ಬಂದರೆ ದೇವಸ್ಥಾನಗಳ ಆಡಳಿತ ಭಕ್ತರಿಗೆ ಹಸ್ತಾಂತರ: ಡಿವಿಎಸ್

ಪಿಟಿಐ
Published 22 ಮಾರ್ಚ್ 2021, 19:08 IST
Last Updated 22 ಮಾರ್ಚ್ 2021, 19:08 IST
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ತಿರುವನಂತಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು  –ಪಿಟಿಐ ಚಿತ್ರ
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ತಿರುವನಂತಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು –ಪಿಟಿಐ ಚಿತ್ರ   

ತಿರುವನಂತಪುರ: ಕೇರಳ ರಾಜ್ಯವು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಸೋಮವಾರ ಆರೋಪಿಸಿದ್ದಾರೆ. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಉತ್ತರ ಪ್ರದೇಶ ಮಾದರಿಯಲ್ಲಿ ಲವ್ ಜಿಹಾದ್ ಕಾನೂನು ಜಾರಿ ಮಾಡಲಾಗುವುದು ಎಂದರು ಹೇಳಿದರು.

ಪಕ್ಷದ ಪರವಾಗಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಿರುವ ಅವರು, ರಾಜ್ಯದ ದೇವಾಲಯಗಳನ್ನು ನಿರ್ವಹಿಸುವ ದೇವಸ್ವಂ ಮಂಡಳಿಗಳನ್ನು ರದ್ದುಪಡಿಸಿ ಭಕ್ತರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು. ‘ದೇವಸ್ವಂ ಮಂಡಳಿಗಳು ಸಿಪಿಎಂ ಪಕ್ಷದ ಚಟುವಟಿಕೆಯ ಕೇಂದ್ರಗಳಾಗಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅವುಗಳನ್ನು ರದ್ದುಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT