ADVERTISEMENT

ರ್‍ಯಾಗಿಂಗ್ ಪ್ರಕರಣ: ₹7 ಲಕ್ಷ ಠೇವಣಿ ಇಡಲು ಕೇರಳ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಪಿಟಿಐ
Published 1 ಜುಲೈ 2025, 11:16 IST
Last Updated 1 ಜುಲೈ 2025, 11:16 IST
ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್   

ಕೊಚ್ಚಿ: ರ್‍ಯಾಗಿಂಗ್‌ನಲ್ಲಿ ಮೃತಪಟ್ಟ ವಿದ್ಯಾರ್ಥಿಯ ಕುಟುಂಬಕ್ಕೆ ಮಾನವ ಹಕ್ಕುಗಳ ಆಯೋಗದ ಆದೇಶದಂತೆ ಪರಿಹಾರ ಪಾವತಿಸಲು ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ₹7 ಲಕ್ಷ ಠೇವಣಿ ಇಡಬೇಕು ಎಂದು ಕೇರಳ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ರ್‍ಯಾಗಿಂಗ್‌ನಲ್ಲಿ ಮೃತಪಟ್ಟಿದ್ದಾರೆ ಎನ್ನಲಾದ ಪೂಕೋಡ್ ‍ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸಿದ್ಧಾರ್ಥನ್ ಜೆ.ಎಸ್‌ ಕುಟುಂಬಕ್ಕೆ ₹7 ಲಕ್ಷ ಹಣವನ್ನು ಪರಿಹಾರವಾಗಿ ಪಾವತಿಸಬೇಕು ಎನ್ನುವ ಮಾನವ ಹಕ್ಕುಗಳ ಆಯೋಗದ ಆದೇಶದ ವಿರುದ್ಧ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

10 ದಿನದೊಳಗೆ ಠೇವಣಿ ಇಡಬೇಕು ಎಂದು ಸೂಚಿಸಿದೆ.

ADVERTISEMENT

ಅಲ್ಲದೆ ಆಯೋಗದ ಆದೇಶಕ್ಕೆ ವಿರುದ್ಧವಾಗಿ ಅರ್ಜಿ ಸಲ್ಲಿಸಲು ಉಂಟಾದ ವಿಳಂಬವನ್ನು ಇದೇ ವೇಳೆ ಪ್ರಶ್ನಿಸಿದ ಕೋರ್ಟ್, ಈ ಬಗ್ಗೆ ಕಾರಣ ವಿವರಿಸಿ ವಿಸ್ತೃತವಾದ ಅಫಿಡವಿಟ್ ಸಲ್ಲಿಸುವಂತೆ ಆದೇಶಿಸಿದೆ.

ಕಳೆದ ವರ್ಷ ಫೆಬ್ರುವರಿ ತಿಂಗಳಲ್ಲಿ ಕೇರಳದ ವಯನಾಡ್ ಜಿಲ್ಲೆಯಲ್ಲಿರುವ ಪೂಕೋಡ್ ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ 20 ವರ್ಷದ ವಿದ್ಯಾರ್ಥಿ ಸಿದ್ಧಾರ್ಥನ್ ಎನ್ನುವವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಆಡಳಿತರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಸಂಘಟನೆ ಎಸ್‌ಎಫ್‌ಐ ವಿದ್ಯಾರ್ಥಿಗಳು ಸೇರಿದಂತೆ ಸಹಪಾಠಿಗಳ ರ್‍ಯಾಗಿಂಗ್‌ಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.