ಸಾಂದರ್ಭಿಕ ಚಿತ್ರ
ತಿರುವನಂತಪುರ: ‘ಕರ್ನಾಟಕದ ಉತ್ತರ ಭಾಗದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಕೇರಳದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ಹೇಳಿದೆ.
ಜೂನ್ 14ರಿಂದ 17ರವರೆಗೆ ಭಾರೀ ಮಳೆಯಾಗಲಿದೆ. ಬಿರುಗಾಳಿ ಬೀಸಲಿದೆ. ಈ ಅವಧಿಯಲ್ಲಿ ಕೇರಳ, ಕರ್ನಾಟಕ, ಲಕ್ಷದ್ವೀಪ ತೀರದಲ್ಲಿ ಬಲವಾಗಿ ಗಾಳಿ ಬೀಸುವುದರಿಂದ ಮೀನುಗಾರರು ಎಚ್ಚರದಿಂದಿರಬೇಕು ಎಂದು ಇಲಾಖೆ ಹೇಳಿದೆ.
ಕೇರಳದ ಒಂಬತ್ತು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (11ರಿಂದ 20 ಸೆಂ.ಮೀ), ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ (20 ಸೆಂ.ಮೀ.ಗೂ ಹೆಚ್ಚು) ಮತ್ತು ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (6ರಿಂದ 11 ಸೆಂ.ಮೀ.) ನೀಡಲಾಗಿದೆ.
ಈ ವರ್ಷ ಮೇ 24ರಂದೇ ಮುಂಗಾರು ಕೇರಳ ಪ್ರವೇಶಿಸಿದೆ. ಮೇ 31ರವರೆಗೂ ರಾಜ್ಯದಲ್ಲಿ ವ್ಯಾಪಕ ಮಳೆಯಾದ ಪರಿಣಾಮ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿತ್ತು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಅಂದಾಜಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.