ತಿರುವನಂತಪುರ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಭೂ ಕುಸಿತ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಕೋಯಿಕ್ಕೋಡ್ ಜಿಲ್ಲೆಯಲ್ಲಿ ತಗ್ಗುಪ್ರದೇಶಗಳಲ್ಲಿನ ಮನೆಗಳು ಜಲಾವೃತಗೊಂಡಿವೆ. ಕಾಸರಗೋಡು, ಕಣ್ಣೂರು ಮತ್ತು ವಯನಾಡ್ ಜಿಲ್ಲೆಗಳಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ನದಿತಟದಲ್ಲಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಮುಂದಿನ ಮೂರು ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಕೋಯಿಕ್ಕೋಡ್ ಜಿಲ್ಲೆಗೆ 19ರಂದು, ಮಲಪ್ಪುರ ಜಿಲ್ಲೆಗೆ 20ರಂದು ‘ರೆಡ್ ಅಲರ್ಟ್’ ಘೋಷಣೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.