
ಸಾಂದರ್ಭಿಕ ಚಿತ್ರ
ತಿರುವನಂತಪುರ: ಕೇರಳದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೋಟಯಂ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ತಿರುವನಂತಪುರ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ರಾಜ್ಯದ ವಿವಿಧೆಡೆ ಮರಗಳು ಉರುಳಿಬಿದ್ದು, ಮನೆಗಳಿಗೆ ಹಾನಿಯಾಗಿದೆ. ತಿರುವನಂತಪುರ ಸಮೀಪದ ಕಟ್ಟಕ್ಕಡದಲ್ಲಿರುವ ಕೋಳಿ ಫಾರಂ ಒಳಗೆ ಪ್ರವಾಹದ ನೀರು ನುಗ್ಗಿ ಸುಮಾರು 5,000 ಕೋಳಿಗಳು ಮೃತಪಟ್ಟಿವೆ. ಕೊಚ್ಚಿಯ ವಿವಿಧ ಬಡಾವಣೆಗಳ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ಕಲಮಶ್ಶೇರಿ ಪ್ರದೇಶದಲ್ಲೂ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮೇಘಸ್ಫೋಟದಿಂದಾಗಿ ತೀವ್ರ ಮಳೆ ಆಗುತ್ತಿದೆ ಎಂದು ಕೊಚ್ಚಿನ್‌ನ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ತಜ್ಞರು ತಿಳಿಸಿದ್ದಾರೆ. ಆದರೆ ಇದನ್ನು ಭಾರತೀಯ ಹವಾಮಾನ ಇಲಾಖೆ ದೃಢಪಡಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.