ADVERTISEMENT

ಕೇರಳವನ್ನು 'ಕೇರಳಂ' ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ: ವರದಿ

ಪಿಟಿಐ
Published 24 ಫೆಬ್ರುವರಿ 2026, 9:45 IST
Last Updated 24 ಫೆಬ್ರುವರಿ 2026, 9:45 IST
   

ನವದೆಹಲಿ: ಕೇರಳ ಸರ್ಕಾರದ ಮನವಿಯಂತೆ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಏಪ್ರಿಲ್–ಮೇ ತಿಂಗಳಲ್ಲಿ ಕೇರಳದಲ್ಲಿ ಚುನಾವಣೆಗಳು ಜರುಗಲಿದ್ದು, ಅದಕ್ಕೂ ಮುನ್ನ ಈ ಬೆಳವಣಿಗೆಯಾಗಿದೆ.

2023ರ ಆಗಸ್ಟ್‌ನಲ್ಲಿ ರಾಜ್ಯದ ಹೆಸರನ್ನು ’ಕೇರಳಂ’ ಎಂದು ಕೇಂದ್ರ ಸರ್ಕಾರವು ಬದಲಾಯಿಸಬೇಕು ಎಂದು ಒತ್ತಾಯಿಸಿ, ಕೇರಳ ವಿಧಾನಸಭೆಯಲ್ಲಿ ಬಹುಮತದ ನಿರ್ಣಯ ಕೈಗೊಳ್ಳಲಾಗಿತ್ತು. ಕೇಂದ್ರ ಗೃಹ ಸಚಿವಾಲಯವು ಕೆಲವು ತಾಂತ್ರಿಕ ಬದಲಾವಣೆಗಳನ್ನು ಸೂಚಿಸಿದ್ದ ಕಾರಣ, 2024ರ ಜುಲೈ 24ರಂದು ಎರಡನೇ ಬಾರಿ ನಿರ್ಣಯವನ್ನು ಮಾಡಲಾಗಿತ್ತು.

ADVERTISEMENT

ಪ್ರಧಾನ ಮಂತ್ರಿ ಕಾರ್ಯಾಲಯದ(ಪಿಎಂಒ) ಹೊಸ ಕಟ್ಟಡವಾದ ಸೇವಾತೀರ್ಥದಲ್ಲಿ ಮಂಗಳವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ಕೇರಳದ ಮನವಿಯಂತೆ ಹೆಸರನ್ನು ಬದಲಾವಣೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ರಾಜ್ಯವನ್ನು ಮಲಯಾಳ ಭಾಷೆಯಲ್ಲಿ ‘ಕೇರಳಂ’ ಎಂದು ಕರೆಯಲಾಗುತ್ತದೆ. ಆದರೆ, ಸಂವಿಧಾನದಲ್ಲಿ ಕೇರಳ ಎಂದು ಬರೆಯಲಾಗಿದೆ. ಸಂವಿಧಾನದ ಎಂಟನೇ ಪರಿಚ್ಛೇದ ಸೇರಿದಂತೆ ಎಲ್ಲಾ ಕಡೆಗಳಲ್ಲೂ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರಕ್ಕೆ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.