ADVERTISEMENT

ಕೇರಳದಲ್ಲಿ ಎಸ್‌ಐಆರ್‌ ಜಾರಿ: ಸಿಎಂ ಪಿಣರಾಯಿ ಮೌನ ಪ್ರಶ್ನಿಸಿದ ಕೆ.ಸಿ.ವೇಣುಗೋಪಾಲ್

ಪಿಟಿಐ
Published 26 ಸೆಪ್ಟೆಂಬರ್ 2025, 13:53 IST
Last Updated 26 ಸೆಪ್ಟೆಂಬರ್ 2025, 13:53 IST
ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್   

ತಿರುವನಂತಪುರ: ರಾಜ್ಯದಲ್ಲಿ ಎಸ್‌ಐಆರ್‌ ಜಾರಿಗೊಳಿಸಿದ ಚುನಾವಣಾ ಆಯೋಗದ ಕ್ರಮದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ‘ಮೌನ’ವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಶುಕ್ರವಾರ ಪ್ರಶ್ನಿಸಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ ಎಲ್ಲ ಮುಖ್ಯಮಂತ್ರಿಗಳು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ವಿರೋಧಿಸಿದ್ದರೂ, ವಿಜಯನ್‌ ಮಾತ್ರ ಇದರ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಎಸ್‌ಐಆರ್‌ ವಿರುದ್ಧ ಮಾತನಾಡಿದ್ದಾರೆ. ಸಿಪಿಎಂ ಸಹ ವಿರೋಧ ವ್ಯಕ್ತಪಡಿಸಿದೆ. ಆದರೆ ಕೇರಳ ಮುಖ್ಯಮಂತ್ರಿ ಮಾತ್ರ ಇನ್ನೂ ಏನನ್ನೂ ಹೇಳಿಲ್ಲ ಎಂದರು.

ADVERTISEMENT

ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯು (ಕೆಪಿಸಿಸಿ) ಚುನಾವಣಾ ಆಯೋಗದ ನಿರ್ಧಾರವನ್ನು ಟೀಕಿಸಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸಿದ ಹೊತ್ತಲ್ಲಿ ಎಸ್‌ಐಆರ್‌ ಅವೈಜ್ಞಾನಿಕ ಎಂದಿತ್ತು.

2002ರ ಮತದಾರರ ಪಟ್ಟಿಯನ್ನು ಆಧರಿಸಿ ಕೇರಳದಲ್ಲಿ ಎಸ್‌ಐಆರ್‌ ನಡೆಸಲಾಗುತ್ತಿದ್ದು, 53.25 ಲಕ್ಷ ಹೆಸರನ್ನು 2025ರ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಕೆಪಿಸಿಸಿ ದೂರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.