
ವಯನಾಡ್ (ಕೇರಳ): ಶಾಂತಿ ಮತ್ತು ಪ್ರೀತಿಯನ್ನು ಉತ್ತೇಜಿಸುವ ಸೃಜನಾತ್ಮಕ ಸಿನಿಮಾಗಳು ಬರಬೇಕು ಎಂದು ಸಂಸದೆ ಪ್ರಿಯಾಂಕ ಗಾಂಧಿ ವಾದ್ರಾ ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.
ಕೇರಳ ಪ್ರವಾಸದಲ್ಲಿರುವ ಅವರು, 'ದಿ ಕೇರಳ ಸ್ಟೋರಿ–2‘ ಸಿನಿಮಾ ಬಿಡುಗಡೆಗೆ ನ್ಯಾಯಾಲಯ ತಡೆ ನೀಡಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಜನರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಇರಬೇಕು ಎನ್ನುವುದು ನನ್ನ ಅಭಿಪ್ರಾಯ. ಆದರೆ ಪರಸ್ಪರ ಕೋಪ, ದ್ವೇಷ ಮತ್ತು ಪ್ರಚೋದನಾತ್ಮಕ ಭಾಷಣಗಳೇ ತುಂಬಿರುವ ಇಂದಿನ ದಿನಗಳಲ್ಲಿ ಸಂತೋಷ, ಶಾಂತಿ, ಪ್ರೀತಿ ಹಾಗೂ ಜನರ ಕಲ್ಯಾಣವನ್ನು ಉತ್ತೇಜಿಸುವ ಸೃಜನಾತ್ಮಕ ಸಿನಿಮಾಗಳು ಬರಬೇಕು ಎಂಬುದು ವಿಶೇಷ ಎಂದರು.
ಇಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಧರ್ಮ, ಜಾತಿ ಭೇದವಿಲ್ಲದೆ ಎಲ್ಲರೂ ಪರಸ್ಪರ ಸಹಾಯಹಸ್ತ ಚಾಚಿದ ಉದಾಹರಣೆಯನ್ನು ಅವರು ಉಲ್ಲೇಖಿಸಿದರು.
ತಾನು ವಯನಾಡು ಸಂಸದೆಯಾದ ಬಳಿಕ ಇಲ್ಲಿನ ಜನರು ಹೇಗೆ ಒಗ್ಗಟ್ಟಿನಿಂದ ಬದುಕುತ್ತಾರೆ, ಹಬ್ಬಗಳನ್ನು ಆಚರಿಸುತ್ತಾರೆ ಮತ್ತು ಸಂಕಷ್ಟದ ಸಮಯದಲ್ಲಿ ಪರಸ್ಪರ ನೆರವಾಗುತ್ತಾರೆ ಎಂಬುದನ್ನು ಸಮೀಪದಿಂದ ನೋಡಿದ್ದೇನೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.