ADVERTISEMENT

ಕೇರಳ: ತ್ರಿಶೂರ್ ರೈಲ್ವೆ ನಿಲ್ದಾಣದಲ್ಲಿ ನೂರಾರು ದ್ವಿಚಕ್ರ ವಾಹನಗಳು ಬೆಂಕಿಗಾಹುತಿ

ಪಿಟಿಐ
Published 4 ಜನವರಿ 2026, 8:05 IST
Last Updated 4 ಜನವರಿ 2026, 8:05 IST
<div class="paragraphs"><p>ಎಕ್ಸ್ ಚಿತ್ರ</p></div>

ಎಕ್ಸ್ ಚಿತ್ರ

   

ತ್ರಿಶೂರ್: ಕೇರಳದ ತ್ರಿಶೂರ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಇಂದು (ಭಾನುವಾರ) ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪೇಯ್ಡ್-ಪಾರ್ಕಿಂಗ್ ಪ್ರದೇಶದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಅವಘಡ ಸಂಭವಿಸಿತ್ತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. 

ADVERTISEMENT

ವಿದ್ಯುತ್ ತಂತಿಯಿಂದ ಬಿದ್ದ ಬೆಂಕಿಯ ಕಿಡಿಯಿಂದ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. 

ಈ ಪಾರ್ಕಿಂಗ್ ಪ್ರದೇಶದಲ್ಲಿ ಸುಮಾರು 400ರಷ್ಟು ದ್ವಿಚಕ್ರ ವಾಹನಗಳನ್ನು ನಿಲುಗೊಡೆಗೊಳಿಸಲಾಗಿತ್ತು. ಬೆಳಿಗ್ಗೆ 7.45ರ ವೇಳೆಗೆ ಬೆಂಕಿ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಕಿ ಅವಘಡಕ್ಕೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.