ಎಐ ಚಿತ್ರ
ಕೊಟ್ಟಾಯಂ: ಕೇರಳದಲ್ಲಿ ಇದೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆಂದೇ ಪ್ರತ್ಯೇಕವಾಗಿ ಹಾಸ್ಟೆಲ್ ವ್ಯವಸ್ಥೆಯನ್ನು ಮಾಡಲಾಗಿದೆ. ಇಲ್ಲಿನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ಈ ಹಾಸ್ಟೆಲ್ ಅನ್ನು ತೆರೆಯಲಾಗಿದೆ.
ಸಾಮಾಜಿಕ ನ್ಯಾಯ ಇಲಾಖೆಯ ಸಚಿವೆ ಆರ್. ಬಿಂದು ಅವರು ಇತ್ತೀಚೆಗೆ ಹಾಸ್ಟೆಲ್ ಉದ್ಘಾಟಿಸಿದರು. ತಮಗಾಗಿಯೇ ಹಾಸ್ಟೆಲ್ ವ್ಯವಸ್ಥೆಯನ್ನು ರೂಪಿಸಿಕೊಡುವಂತೆ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಬಹದಿನಗಳಿಂದ ಬೇಡಿಕೆ ಸಲ್ಲಿಸುತ್ತಲೇ ಇದ್ದರು.
‘ಸದ್ಯ ಆರಂಭಿಸಲಾಗಿರುವ ಹಾಸ್ಟೆಲ್‌ನಲ್ಲಿ ಆರು ಮಂದಿ ವಿದ್ಯಾರ್ಥಿಗಳಿಗೆ ಮಾತ್ರವೇ ಕೊಠಡಿಗಳಿವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಉಳಿದುಕೊಳ್ಳುವ ದೊಡ್ಡ ಮಟ್ಟದ ಹಾಸ್ಟೆಲ್ ನಿರ್ಮಿಸಲಾಗುವುದು’ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.