ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ತಿರುವನಂತಪುರ: ದೇವಸ್ಥಾನಗಳನ್ನು ಪ್ರವೇಶಿಸುವ ಮುನ್ನ ಪುರುಷರು ತಮ್ಮ ಮೇಲಂಗಿಯನ್ನು ತೆಗೆಯುವ ಪದ್ಧತಿ ಕೈ ಬಿಡಬೇಕು ಎಂದು ಒತ್ತಾಯಿಸಿ ಕೇರಳದಲ್ಲಿ ಶುಕ್ರವಾರ ಪ್ರತಿಭಟನೆ ಆಯೋಜಿಸಲಾಗಿದೆ.
ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿರುವ ಶಿವಗಿರಿ ಮಠದ ಜೊತೆಗೆ ಗುರುತಿಸಿಕೊಂಡಿರುವ ‘ಗುರುಧರ್ಮ ಪ್ರಚಾರ ಸಭಾ’ವು ತಿರುವನಂತಪುರದಲ್ಲಿರುವ ತಿರುವಾಂಕೂರು ದೇವಸ್ವ ಮಂಡಳಿ (ಟಿಡಿಬಿ) ಕಚೇರಿ ಮುಂದೆ ರ‍್ಯಾಲಿ ಹಾಗೂ ಪ್ರಾರ್ಥನೆ ನಡೆಸಲು ನಿರ್ಧರಿಸಿದೆ. ಈ ವಿಚಾರವನ್ನು ಮೊದಲಿಗೆ ಪ್ರಸ್ತಾಪಿಸಿದ್ದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರು ರ‍್ಯಾಲಿಗೆ ಚಾಲನೆ ನೀಡಲಿದ್ದಾರೆ.
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾಗಿ ಮಲಯಾಳ ಬ್ರಾಹ್ಮಣ ಸಮುದಾಯದವರೇ ನೇಮಕ ಮಾಡುತ್ತಿರುವ ಪದ್ಧತಿ ಕೈ ಬಿಡಬೇಕು ಎಂದು ಪ್ರತಿಭಟನೆಯಲ್ಲಿ ಪ್ರಸ್ತಾಪಿಸಲಿದ್ದಾರೆ.
ಮೇಲಂಗಿ ತೆಗೆಯಬೇಕು ಎಂದು ಸ್ವಾಮೀಜಿ ನೀಡಿದ್ದ ಹೇಳಿಕೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಾಗತಿಸಿದ್ದರು. ಅದಾದ ಮೇಲೆ ವಿಷಯದ ಕುರಿತು ಪರ–ವಿರೋಧ ಚರ್ಚೆಗಳು ನಡೆದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.