ADVERTISEMENT

ಶಾಲೆ ಗೋಡೆ ಮೇಲೆ ಖಾಲಿಸ್ತಾನ ಪರ ಬರಹ: ಮೂವರ ಬಂಧನ

ಪಿಟಿಐ
Published 31 ಅಕ್ಟೋಬರ್ 2025, 15:38 IST
Last Updated 31 ಅಕ್ಟೋಬರ್ 2025, 15:38 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಚಂಡೀಗಢ: ಪಂಜಾಬ್‌ನ ಶಾಲೆಯ ಗೋಡೆಗಳ ಮೇಲೆ ಖಾಲಿಸ್ತಾನ ಪರ ಘೋಷಣೆಗಳನ್ನು ಗೀಚಿದ್ದ ನಿಷೇಧಿತ ಸಂಘಟನೆ ‘ಸಿಖ್ಸ್‌ ಫಾರ್‌ ಜಸ್ಟೀಸ್‌’ನ ಮೂವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಮತ್ತು ರಾಷ್ಟ್ರ ವಿರೋಧಿ ಭಾವನೆಗಳನ್ನು ಮೂಡಿಸುವ ಉದ್ದೇಶದಿಂದ ಮೂವರು ಆರೋಪಿಗಳು ಶಾಲೆಯ ಗೋಡೆಗಳ ಮೇಲೆ ಪ್ರಚೋದನಕಾರಿ ಘೋಷಣೆಗಳನ್ನು ಬರೆದಿದ್ದಾರೆ ಎಂಬುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು. 

ಭಿಸ್ಸಿನಿಯಾ ಹಾಗೂ ಮನನ್‌ವಾಲಾ ಗ್ರಾಮಗಳ ಶಾಲೆಗಳ ಗೋಡೆ ಮೇಲೆ ಘೋಷಣೆಗಳನ್ನು ಬರೆಯಲಾಗಿದೆ. ಭಯೋತ್ಪಾದನಾ ನಿಗ್ರಹ ದಳ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನೂ ಬೆಂಬಲಿತರು ಎಂದು ಡಿಜಿಪಿ ಗೌರವ್‌ ಯಾದವ್‌ ‘ಎಕ್ಸ್‌’ನಲ್ಲಿ ಮಾಹಿತಿ ನೀಡಿದ್ದಾರೆ. 

ಇಂತಹ ಅಕ್ರಮ ಚಟುವಟಿಕೆಗಳಿಗೆ ಆರೋಪಿಗಳು ವಿದೇಶದಿಂದ ಹಣ ಪಡೆಯುತ್ತಿದ್ದರು ಎಂಬುದಕ್ಕೆ ಪುರಾವೆಗಳು ದೊರೆತಿವೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.