ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು
ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಧ್ವಜಾರೋಹಣ ಮಾಡದಂತೆ ತಡೆಯುವವರಿಗೆ ಬಹುಮಾನ ಘೋಷಿಸಿದ್ದ ಅಮೆರಿಕ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೊಸ ಪ್ರಕರಣ ದಾಖಲಿಸಿದೆ.
ಎನ್‌ಐಎಯ ಎಫ್‌ಐಆರ್ ಪ್ರಕಾರ, ಪನ್ನುನ್ ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ಸಂಘಟನೆಯ ಪ್ರಮುಖ ನಾಯಕನಾಗಿದ್ದು, ಆಗಸ್ಟ್ 10ರಂದು ಲಾಹೋರ್ ಪ್ರೆಸ್ ಕ್ಲಬ್‌ನಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದ.
ವಾಷಿಂಗ್ಟನ್‌ನಿಂದ ಮಾಡಲಾಗಿದ್ದ ವಿಡಿಯೊ ಭಾಷಣದಲ್ಲಿ ಮಾತನಾಡಿದ್ದ ಪನ್ನುನ್, ಪ್ರಧಾನಿ ಮೋದಿ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವುದನ್ನು ತಡೆಯುವ ಸಿಖ್ ಸೈನಿಕರಿಗೆ ₹11 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.