ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
(ಪಿಟಿಐ ಸಂಗ್ರಹ ಚಿತ್ರ)
ಗುವಾಹಟಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಅಸ್ಸಾಂಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ರಾಜ್ಯದ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.
ಮುಂದಿನ ವರ್ಷದ ಅಸ್ಸಾಂ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಗೌರವ್ ಗೊಗೊಯ್ ಅವರನ್ನು ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಿದ ನಂತರ ಪಕ್ಷದ ವರಿಷ್ಠರ ಮೊದಲ ಭೇಟಿ ಇದಾಗಿದೆ.
ದಿನವಿಡೀ ಪ್ರವಾಸದ ಸಮಯದಲ್ಲಿ ಖರ್ಗೆ ಮತ್ತು ರಾಹುಲ್ ಗಾಂಧಿ ಎರಡು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಅದರಲ್ಲಿ ಗುವಾಹಟಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಚಾಯ್‌ಗಾಂವ್‌ನಲ್ಲಿ ಒಂದು ಸಭೆ ನಡೆಯಲಿದೆ.
ಸಭೆಗಳ ಸಮಯದಲ್ಲಿ ಪಕ್ಷದ ಜಿಲ್ಲಾ, ಬ್ಲಾಕ್ ಮತ್ತು ಮಂಡಲ ಅಧ್ಯಕ್ಷರು ನಾಯಕರ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ ಎಂದು ಗೊಗೊಯ್ ತಿಳಿಸಿದ್ದಾರೆ.
‘ಈ ಭೇಟಿಯು ನ್ಯಾಯ, ಸಾಮರಸ್ಯ ಮತ್ತು ಎಲ್ಲರನ್ನೂ ಒಳಗೊಂಡ ಪ್ರಗತಿಗೆ ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ಪುನರುಚ್ಚರಿಸುತ್ತದೆ’ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.