ADVERTISEMENT

ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಕೋರಿದ ಖರ್ಗೆ, ರಾಹುಲ್ ಗಾಂಧಿ

ಪಿಟಿಐ
Published 17 ಸೆಪ್ಟೆಂಬರ್ 2023, 5:36 IST
Last Updated 17 ಸೆಪ್ಟೆಂಬರ್ 2023, 5:36 IST
<div class="paragraphs"><p>ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ &nbsp;–-ಪಿಟಿಐ ಚಿತ್ರ</p></div>

ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  –-ಪಿಟಿಐ ಚಿತ್ರ

   

ಹೈದರಾಬಾದ್: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) 73ನೇ ವರ್ಷದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಶುಭ ಕೋರಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ದೇವರು ಆರೋಗ್ಯ, ದೀರ್ಘಾಯುಷ್ಯ ಆಶೀರ್ವದಿಸಲಿ ಎಂದು ಮಲ್ಲಿಕಾರ್ಜುನ ಖರ್ಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.