ADVERTISEMENT

SC, ST, ಅಲ್ಪಸಂಖ್ಯಾತ ಯುವಕರ ವಿದ್ಯಾರ್ಥಿವೇತನವನ್ನು ಬಿಜೆಪಿ ಕಸಿದಿದೆ: ಖರ್ಗೆ

ಪಿಟಿಐ
Published 25 ಫೆಬ್ರುವರಿ 2025, 8:28 IST
Last Updated 25 ಫೆಬ್ರುವರಿ 2025, 8:28 IST
ಖರ್ಗೆ
ಖರ್ಗೆ   

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಸರ್ಕಾರ ದೇಶದಲ್ಲಿರುವ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವರ್ಗಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಂಡಿದೆ. ನಿಮ್ಮ ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌’ ಘೋಷಣೆಯು ಪ್ರತಿದಿನ ದುರ್ಬಲ ವರ್ಗಗಳ ಯುವಕರ ಆಕಾಂಕ್ಷೆಗಳನ್ನು ಅಣಕಿಸುತ್ತಿದೆ’ ಎಂದು ಹೇಳಿದ್ದಾರೆ.

ದೇಶದ ದುರ್ಬಲ ವರ್ಗದ ವಿದ್ಯಾರ್ಥಿಗಳು ಅವಕಾಶಗಳನ್ನು ಪಡೆಯದ ಹೊರತು ಮತ್ತು ಅವರ ಕೌಶಲ್ಯಗಳನ್ನು ಪ್ರೋತ್ಸಾಹಿಸದ ಹೊರತು, ನಮ್ಮ ದೇಶದ ಯುವಕರಿಗೆ ನಾವು ಹೇಗೆ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ADVERTISEMENT

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಎಲ್ಲಾ ವಿದ್ಯಾರ್ಥಿವೇತನಗಳ ಫಲಾನುಭವಿಗಳ ಸಂಖ್ಯೆಯನ್ನು ಭಾರಿ ಪ್ರಮಾಣದಲ್ಲಿ ಕಡಿಮೆ ಮಾಡಿರುವುದು ಮಾತ್ರವಲ್ಲದೆ, ವರ್ಷದಿಂದ ವರ್ಷಕ್ಕೆ ಶೇ 25ರಷ್ಟು ಕಡಿಮೆ ಹಣವನ್ನು ಖರ್ಚು ಮಾಡಿದೆ ಎಂಬುದನ್ನು ಸರ್ಕಾರದ ಅಂಕಿಅಂಶ ತೋರಿಸುತ್ತಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.