ADVERTISEMENT

Bharat Jodo Yatra: ಭದ್ರತಾ ಲೋಪ; ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಖರ್ಗೆ ಕೋರಿಕೆ

ಪಿಟಿಐ
Published 28 ಜನವರಿ 2023, 6:13 IST
Last Updated 28 ಜನವರಿ 2023, 6:13 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆಗೆ ಸೂಕ್ತ ಭದ್ರತೆಯನ್ನು ನೀಡುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ.

ಭದ್ರತಾ ಲೋಪದ ಹಿನ್ನೆಲೆಯಲ್ಲಿ ಶುಕ್ರವಾರದಂದು ಒಂದು ದಿನದ ಮಟ್ಟಿಗೆ ಭಾರತ್ ಜೋಡೊ ಯಾತ್ರೆಯನ್ನು ರದ್ದು ಮಾಡಲಾಗಿತ್ತು.

ADVERTISEMENT

ಮುಂದಿನ ಎರಡು ದಿನಗಳಲ್ಲಿ ಹಾಗೂ ಜನವರಿ 30ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೃಹತ್ ಸಮಾವೇಶಕ್ಕೆ ಭಾರಿ ಜನಸಂದಣಿಯನ್ನು ನಿರೀಕ್ಷಿಸುತ್ತಿದ್ದೇವೆ. ಕಾಂಗ್ರೆಸ್ ಮತ್ತು ಇತರೆ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಖರ್ಗೆ ಉಲ್ಲೇಖ ಮಾಡಿದ್ದಾರೆ.

ಈ ವಿಷಯದಲ್ಲಿ ತಾವು (ಅಮಿತ್ ಶಾ) ವೈಯಕ್ತಿಕವಾಗಿ ಮಧ್ಯ ಪ್ರವೇಶಿಸಿ ಭಾರತ್ ಜೋಡೊ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ಖರ್ಗೆ ಮನವಿ ಮಾಡಿದ್ದಾರೆ.

2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಅಂತ್ಯಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.