ಮಧುರೈ: ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಮಧುರೈ ಎಸ್ಪಿ ಹೇಳಿದ್ದಾರೆ.
ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಮೂಲಗಳ ಪ್ರಕಾರ ವಾಣಿಜ್ಯ ತೆರಿಗೆ ಸಚಿವ ಪಿ.ಮೂರ್ತಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯ ತ್ವರಿತಗೊಳಿಸಲು ಸಿಎಂ ಸೂಚಿಸಿದ್ದಾರೆ. ಗಾಯಾಳುಗಳಿಗೆ ಮಧುರೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಿರುಮಂಗಲಂ ಬಳಿ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.