ADVERTISEMENT

ಮೃತ ರೈತರ ಕುಟುಂಬಕ್ಕೆ ಪಿಎಂ ಕೇರ್ಸ್‌ ನಿಧಿಯಿಂದ ಪರಿಹಾರ ನೀಡಿ: ಸಂಜಯ್‌ ರಾವುತ್‌

ಪಿಟಿಐ
Published 21 ನವೆಂಬರ್ 2021, 10:55 IST
Last Updated 21 ನವೆಂಬರ್ 2021, 10:55 IST
ಸಂಜಯ್‌ ರಾವುತ್‌
ಸಂಜಯ್‌ ರಾವುತ್‌   

ಮುಂಬೈ: ವರ್ಷವಿಡೀ ನಡೆದ ಮೂರು ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 700 ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಪಿಎಂ ಕೇರ್ಸ್‌ ನಿಧಿಯಿಂದ ಆರ್ಥಿಕ ನೆರವು ಒದಗಿಸಬೇಕು ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಭಾನುವಾರ ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಎರಡು ದಿನಗಳ ನಂತರ ರಾವುತ್‌ ಈ ಬೇಡಿಕೆ ಇಟ್ಟಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಹಲವು ರೈತರು ಮೃತಪಟ್ಟರು. ಕೆಲವರು ಆತ್ಮಹತ್ಯೆ ಮಾಡಿಕೊಂಡರು ಎಂದು ರಾವುತ್‌ ಆರೋಪಿಸಿದರು.

ADVERTISEMENT

ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಅನೇಕ ರೈತರು ಮೃತಪಟ್ಟರುಎಂದೂ ಅವರು ಹೇಳಿದರು.

‘ಸರ್ಕಾರಕ್ಕೆ ಈಗ ತನ್ನ ತಪ್ಪಿನ ಅರಿವಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ. ಅದರ ಜೊತೆಗೆ ದೇಶದಾದ್ಯಂತ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಬೇಕು ಎಂಬ ಬೇಡಿಕೆಯನ್ನು ಈಡೇರಿಸಬೇಕು’ ಎಂದು ರಾವುತ್‌ ಹೇಳಿದರು.

ಪಿಎಂ ಕೇರ್ಸ್‌ ನಿಧಿಯಲ್ಲಿ ಲೆಕ್ಕಕ್ಕೆ ಸಿಗದೇ ಸಂಗ್ರಹವಾಗಿರುವ ಸಾಕಷ್ಟು ಹಣವಿದೆ. ಆ ಹಣವನ್ನು ನಿರ್ಗತಿಕ ರೈತ ಕುಟುಂಬಗಳಿಗೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.