ಕೊಚ್ಚಿ: ಕೇರಳದ ಕೊಚ್ಚಿಯಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ನಡೆಸಲಾಗುತ್ತಿದೆ.
6E6482 ಇಂಡಿಗೋ ವಿಮಾನವು ಬೆಳಿಗ್ಗೆ 10.30ಕ್ಕೆ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಬೇಕಿತ್ತು. ಆದರೆ, ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಗಿದೆ.
ನೆಡುಂಬಶ್ಶೇರಿ ಪೊಲೀಸರು ಕೂಡ ಬಾಂಬ್ ಬೆದರಿಕೆ ಬಂದಿರುವುದನ್ನು ಖಚಿತಪಡಿಸಿದ್ದು, ಈ ಬಗ್ಗೆ ತನಿಖೆ ನಡೆಸಲು ತಂಡವನ್ನು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ತಂಡದ ಪ್ರಾಥಮಿಕ ತನಿಖೆಯ ನಂತರವೇ ಹೆಚ್ಚಿನ ವಿವರಗಳು ಲಭ್ಯವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.