ADVERTISEMENT

ವಿಡಿಯೊ | ಕೊಚ್ಚಿಯಲ್ಲಿ 800 ಕೆ.ಜಿ ಸ್ಫೋಟಕ ಬಳಸಿ ಗಗನಚುಂಬಿ ಕಟ್ಟಡಗಳ ನೆಲಸಮ

​ಪ್ರಜಾವಾಣಿ ವಾರ್ತೆ
Published 12 ಜನವರಿ 2020, 6:20 IST
Last Updated 12 ಜನವರಿ 2020, 6:20 IST
   

ಕೊಚ್ಚಿ:ಇಲ್ಲಿನಮರಡು ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಕೇರಳ ಸರ್ಕಾರ ಆರಂಭಿಸಿದ್ದುಶನಿವಾರ ಎರಡು ಕಟ್ಟಡಗಳನ್ನು ಮತ್ತು ಭಾನುವಾರ ಎರಡು ಕಟ್ಟಡಗಳನ್ನು ನೆಲಸಮಗೊಳಿಸಿದೆ.

ನದಿ ದಂಡೆಯಪಕ್ಕದಲ್ಲಿ ಹಾಗೂಕಟ್ಟಡ ಪರವಾನಿಗೆಯ ನಿಯಾವಳಿಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರತೆರವು ಕಾರ್ಯಾಚರಣೆ ಆರಂಭಿಸಿದ್ದುಈ ಕಾರ್ಯಾಚರಣೆ ನಾಳೆಯೂ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

19 ಮತ್ತು 21 ಅಂತಸ್ತಿನ ಎರಡು ದೊಡ್ಡ ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಎರಡು ಚಿಕ್ಕ ಕಟ್ಟಡಗಳನ್ನು ತೆರವು ಮಾಡಲಾಗಿದೆ. 800 ಕೆ.ಜಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಕಟ್ಟಡಗಳನ್ನು ನೆಲಸಮ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ನೋಡ ನೋಡುತ್ತಿದ್ದಂತೆಯೇ ಎರಡುಗಗನಚುಂಬಿ ಅಪಾರ್ಟ್‌ಮೆಂಟ್‌ಗಳು ನೆಲಕ್ಕುರುಳಿ ದೂಳಿನಲ್ಲಿ ಕಣ್ಮೆರೆಯಾದವು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಕಟ್ಟಡ ಕಟ್ಟುವಾಗ ಕಾನೂನು ನಿಯಮಗಳನ್ನು ಗಾಳಿಗೆ ತೂರಲಾಗಿತ್ತು ಹಾಗೂ ನದಿ ಮೀಸಲು ಪ್ರದೇಶದಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಹಲವು ವರ್ಷಗಳಿಂದ ವಿಚಾರಣೆ ನಡೆದಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್‌ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದರಿಂದ ಈ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಕೇರಳ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡಗಳಲ್ಲಿ ವಾಸವಿದ್ದ ಜನರನ್ನುಖಾಲಿ ಮಾಡಿಸಲಾಗಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದಲ್ಲಿಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.