ADVERTISEMENT

ಅನಂತನಾಗ್‌: ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 14:00 IST
Last Updated 16 ಏಪ್ರಿಲ್ 2022, 14:00 IST
ಸಾಂದರ್ಭಿಕ ಚಿತ್ರ – ಪಿಟಿಐ
ಸಾಂದರ್ಭಿಕ ಚಿತ್ರ – ಪಿಟಿಐ   

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ವಟ್ನಾರ್ ಕೋಕರ್‌ನಾಗ್‌ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

‘ಗುಂಡಿನ ಚಕಮಕಿಯಲ್ಲಿ ಸೇನೆಯ 19 ರಾಷ್ಟ್ರೀಯ ರೈಫಲ್ಸ್‌ನ ಯೋಧ ಗುಂಡೇಟು ಬಿದ್ದು ತೀವ್ರ ಗಾಯಗೊಂಡರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಟ್ನಾರ್‌ ಕೋಕರ್‌ನಾಗ್‌ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.