ADVERTISEMENT

ಕೋಲ್ಕತ್ತ ಸಾಮೂಹಿಕ ಅತ್ಯಾಚಾರ ಪ್ರಕರಣ: ಕ್ಯಾಂಪಸ್ ಭದ್ರತೆಗೆ ಸೇನಾ ಸಿಬ್ಬಂದಿ

ಪಿಟಿಐ
Published 26 ಜುಲೈ 2025, 9:30 IST
Last Updated 26 ಜುಲೈ 2025, 9:30 IST
<div class="paragraphs"><p>ಸೇನಾ ಸಿಬ್ಬಂದಿ</p></div>

ಸೇನಾ ಸಿಬ್ಬಂದಿ

   

Credit: iStock Photo

ಕೋಲ್ಕತ್ತ: ನಗರದ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಮುನ್ನೆಲೆಗೆ ಬಂದ ಬೆನ್ನಲ್ಲೇ ಕಾಲೇಜಿನ ಭದ್ರತೆಗಾಗಿ ನಿವೃತ್ತ ಸೇನಾ ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ADVERTISEMENT

ಕಾಲೇಜಿನ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜತೆಗೆ, ಹಾಸ್ಟೆಲ್‌ ಆವರಣದಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಮತ್ತು ಕಾಲೇಜಿನ ಆಂತರಿಕ ದೂರು ಸಮಿತಿಯನ್ನು ಬಲಪಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಕೋಲ್ಕತ್ತದ ಕಾನೂನು ಪದವಿ ವಿದ್ಯಾರ್ಥಿನಿ ಮೇಲೆ ಜೂನ್‌ 25ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಕಾಲೇಜಿನ ಮಾಜಿ ವಿದ್ಯಾರ್ಥಿ ಮತ್ತು ಗುತ್ತಿಗೆ ಸಿಬ್ಬಂದಿಯಾಗಿರುವ ಮೊನೊಜಿತ್ ಮಿಶ್ರಾ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ, ಅಲಿಪೋರ್ ಪೊಲೀಸ್‌ ಹಾಗೂ ಸೆಷನ್ ಕೋರ್ಟ್‌ನಲ್ಲಿ ಕ್ರಿಮಿನಲ್‌ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದಾನೆಂದು ಕಾಲೇಜು ಮೂಲಗಳು ತಿಳಿಸಿವೆ.

ಈ ಪ್ರಕರಣ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಕೋಲ್ಕತ್ತದ ಶಿಕ್ಷಣ ಸಂಸ್ಥೆಗಳ ಒಳಗೆ ಎಂಟು ತಿಂಗಳ ಅವಧಿಯಲ್ಲಿ ಎರಡು ಸಾಮೂಹಿಕ ಅತ್ಯಾಚಾರ ಘಟನೆಗಳು ನಡೆದಿವೆ. ಆಡಳಿತ ಎಲ್ಲಿದೆ? ಎಂದು ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.