ADVERTISEMENT

ತನ್ನ ರಿವಾಲ್ವಾರ್‌ನಿಂದ ಗುಂಡು ತಾಗಿ ಗಾಯಗೊಂಡ ಪೊಲೀಸ್ ಅಧಿಕಾರಿ!

ಕೋಲ್ಕತ್ತಾ ಎಸ್‌ಎಸ್‌ಎಂಕೆ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ

ಪಿಟಿಐ
Published 3 ಏಪ್ರಿಲ್ 2021, 7:39 IST
Last Updated 3 ಏಪ್ರಿಲ್ 2021, 7:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ: ನಗರದ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಶನಿವಾರ ಕರ್ತವ್ಯನಿರತ ಕೋಲ್ಕತ್ತದ ಸಬ್‌ ಇನ್‌ಸ್ಪೆಕ್ಟರ್‌ ಒಬ್ಬರಿಗೆ, ಅವರ ರಿವಾಲ್ವರ್‌ನ ಗುಂಡೇ ತಗುಲಿದೆ. ಇದರಿಂದ ಅವರು ಗಾಯಗೊಂಡಿದ್ದಾರೆ.

ಘಟನೆ ಕುರಿತು ತನಿಖೆ ನಡೆಯುತ್ತಿದೆ. ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ‘ಇದು ತಪ್ಪಾಗಿ ರಿವಾಲ್ವಾರ್‌ನಿಂದ ಗುಂಡು ಹಾರಿದೆಯೋ ಅಥವಾ ಪೊಲೀಸ್ ಅಧಿಕಾರಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾರೋ‘ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡಿರುವ ಪೊಲೀಸ್ ಅಧಿಕಾರಿ ಈ ಹಿಂದೆ ಇದೇ ಆಸ್ಪತ್ರೆಯ ತೀವ್ರ ನಿಗಾ ಘಕಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.