ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಜಿಲ್ಲಾ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಇಬ್ಬರು ನ್ಯಾಯಾಧೀಶರಿಗೆ ಕೋವಿಡ್–19 ದೃಢಪಟ್ಟಿದೆ.
ಈ ಕಾರಣದಿಂದಾಗಿ ನ್ಯಾಯಾಧೀಶರ ಸಂಪರ್ಕಕ್ಕೆ ಬಂದಿದ್ದವರು ಕಡ್ಡಾಯವಾಗಿ ಮನೆಯಲ್ಲೇ ಕ್ವಾರಂಟೈನ್‌ನಲ್ಲಿ ಇರಬೇಕೆಂದು ಸೂಚಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮೂಲಗಳು ಶನಿವಾರ ತಿಳಿಸಿವೆ.
ಸೋಂಕಿಗೆ ಒಳಗಾದ ನ್ಯಾಯಾಧೀಶರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇವರ ಜೊತೆ ನೇರ ಸಂಪರ್ಕಕ್ಕೆ ಬಂದವರು ಕೋವಿಡ್–19 ಪರೀಕ್ಷೆಗೆ ಒಳಗಾಗಬೇಕು ಎಂದು ಇಲಾಖೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.