ADVERTISEMENT

ಕೋಲ್ಕತ್ತ | ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸಹಪಾಠಿ ಬಂಧನ

ಪಿಟಿಐ
Published 15 ಅಕ್ಟೋಬರ್ 2025, 9:38 IST
Last Updated 15 ಅಕ್ಟೋಬರ್ 2025, 9:38 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕೋಲ್ಕತ್ತ: ಕೋಲ್ಕತ್ತದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯ‌ ಮೇಲೆ ಆಕೆಯ ಸಹಪಾಠಿ ಅತ್ಯಾಚಾರ ಎಸಗಿದ್ದಾಗಿ ಆರೋಪಿಸಲಾಗಿದೆ. ಆರೋಪಿಯನ್ನು ನಗರದ ದಕ್ಷಿಣ ಭಾಗದಲ್ಲಿರುವ ಆನಂದಪುರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳಕ್ಕೆ ಅಧ್ಯಯನಕ್ಕಾಗಿ ಬಂದಿರುವ ಯುವತಿ ತನ್ನ ಸಹಪಾಠಿಯ ಮೇಲೆ ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ADVERTISEMENT

‘ಆನಂದಪುರದಲ್ಲಿ ವಾಸಿಸುತ್ತಿದ್ದ ಯುವತಿಯ ಫ್ಲಾಟ್‌ಗೆ ಬಂದಿದ್ದ ಆರೋಪಿ, ಪಾನೀಯಕ್ಕೆ ಮಾದಕದ್ರವ್ಯ ಬೆರೆಸಿದ್ದನು. ಅದನ್ನು ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿ ಕೆಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದನು, ನಂತರ ಆನಂದಪುರದ ತನ್ನ ಮನೆಗೆ ಮರಳುತ್ತಿದ್ದಂತೆ ಆತನನ್ನು ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯೊಬ್ಬರು ಸಾಮೂಹಿಕ ಅತ್ಯಾಚಾರಕ್ಕೊಳಗಾದ ಕೆಲವು ದಿನಗಳ ನಂತರ ಈ ಘಟನೆ ವರದಿಯಾಗಿದೆ.

ಯುವತಿ ವಿದ್ಯಾರ್ಜನೆಗಾಗಿ ಪಶ್ಚಿಮ ಬಂಗಾಳಕ್ಕೆ ಬಂದಿದ್ದಾರೆ ಎಂದಿರುವ ಪೊಲಿಸರು, ಅವರು ಯಾವ ರಾಜ್ಯಕ್ಕೆ ಸೇರಿದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಕ್ಯಾಂಪಸ್‌ನಿಂದ ಹೊರಗೆ ಹೋದಾಗ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕೆಲ ದಿನಗಳ ಹಿಂದೆ ವರದಿಯಾಗಿತ್ತು.

‘ಕೃತ್ಯದ ನಂತರ ಆರೋಪಿಯು ತಲೆಮರೆಸಿಕೊಂಡಿದ್ದ. ಆನಂದಪುರದಲ್ಲಿರುವ ತನ್ನ ಮನೆಗೆ ಬರುವ ಖಚಿತ ಮಾಹಿತಿ ಆಧರಿಸಿ ಬಂಧಿಸಲಾಗಿದೆ. ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈತನನ್ನು ಅ. 22ರವರೆಗೆ ಪೊಲೀಸ್ ವಶಕ್ಕೆ ನ್ಯಾಯಾಲಯ ನೀಡಿದೆ’ ಎಂದು ಆನಂದಪುರ ಠಾಣೆ ಪೊಲೀಸರು ಹೇಳಿದ್ದಾರೆ.

‘ತನಿಖೆ ಆರಂಭಿಸಲಾಗಿದೆ. ಶೀಘ್ರದಲ್ಲಿ ಅದರ ವರದಿಯನ್ನು ನೀಡಲಾಗುವುದು’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.