
ಪಿಟಿಐ
ಕೋಲ್ಕತ್ತ: ಬೆಂಕಿ ಅವಘಡದಿಂದ ಹಲವಾರು ಕಾರ್ಮಿಕರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದ ಹೋಟೆಲ್ ಉದ್ಯಮಿಯನ್ನು ಬಂಧಿಸುವಂತೆ ಆಗ್ರಹಿಸಿ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಪಕ್ಷದ ಕಾರ್ಯಕರ್ತರು ಕೋಲ್ಕತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕೋಲ್ಕತ್ತದ ಮೊಮೊ ಉತ್ಪಾದನಾ ಘಟಕವೊಂದರಲ್ಲಿ ಜನವರಿ 26ರಂದು ಬೆಂಕಿ ಅವಘಡ ಸಂಭವಿಸಿ, ಹಲವು ಕೆಲಸಗಾರರು ಮೃತಪಟ್ಟಿದ್ದಾರೆ.
ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಗಳನ್ನು ರಕ್ಷಿಸುತ್ತಿದೆ. ಘಟನೆ ನಡೆದು ಐದು ದಿನ ಕಳೆದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸುವೇಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.