ADVERTISEMENT

ಕೋಲ್ಕತ್ತ ಸಾಮೂಹಿಕ ಅತ್ಯಾಚಾರ ಪ್ರಕರಣ: ಬಿಜೆಪಿ ಸತ್ಯಶೋಧನಾ ತಂಡ ಭೇಟಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 7:09 IST
Last Updated 30 ಜೂನ್ 2025, 7:09 IST
   

ಕೋಲ್ಕತ್ತ: ನಗರದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಚಿಸಿದ್ದ ನಾಲ್ವರು ಸದಸ್ಯರ 'ಸತ್ಯಶೋಧನಾ ತಂಡ‘ ನಗರಕ್ಕೆ ಆಗಮಿಸಿದೆ.

ತಂಡದಲ್ಲಿ ಮಾಜಿ ಕೇಂದ್ರ ಸಚಿವರಾದ ಸತ್ಪಾಲ್ ಸಿಂಗ್, ಮೀನಾಕ್ಷಿ ಲೇಖಿ ಮತ್ತು ಸಂಸದರಾದ ಬಿಪ್ಲಬ್ ಕುಮಾರ್ ದೇಬ್ ಹಾಗೂ ಮನನ್ ಕುಮಾರ್ ಮಿಶ್ರಾ ಇದ್ದಾರೆ.

ಮಹಿಳಾ ಮುಖ್ಯಮಂತ್ರಿ ಆಡಳಿತ ನಡೆಸುತ್ತಿರುವ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಪಶ್ಚಿಮ ಬಂಗಾಳ ರಾಜ್ಯವು ಕಾಲೇಜುಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಒಂದರ ನಂತರ ಒಂದರಂತೆ ಭೀಕರ ಘಟನೆಗಳಿಗೆ ಸಾಕ್ಷಿಯಾಗಿದೆ ಎಂದು ದೇಬ್‌ ಹೇಳಿದ್ದಾರೆ.

ADVERTISEMENT

‘ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ, ಕಾನೂನು ವಿದ್ಯಾರ್ಥಿನಿಯೂ ಸಹ‘ ಎಂದು ಅವರು ಕಿಡಿಕಾರಿದ್ದಾರೆ

ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜಿಗೆ ಭೇಟಿ ನೀಡಲು ಮತ್ತು ಮುಖ್ಯ ಕಾರ್ಯದರ್ಶಿಯೊಂದಿಗೆ ವಿಚಾರಣೆ ನಡೆಸಲು ತಂಡಕ್ಕೆ ಅನುಮತಿ ಸಿಗಲಿಲ್ಲ ಎಂದು ದೇಬ್ ಆರೋಪಿಸಿದ್ದಾರೆ.

ಭೇಟಿ ಬಳಿಕ ಸತ್ಯಶೋಧನಾ ತಂಡವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ಸಲ್ಲಿಸಲಿದೆ.

ಜೂನ್ 25 ರಂದು ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಯು ಅದೇ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಬೋಧಕೇತರ ಸಿಬ್ಬಂದಿಯಾಗಿದ್ದ. ಅಲ್ಲದೇ, ಅಲಿಪೋರ್ ಪೊಲೀಸ್‌ ಹಾಗೂ ಸೆಷನ್ ಕೋರ್ಟ್‌ನಲ್ಲಿ ಕ್ರಿಮಿನಲ್‌ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದಾನೆಂದು ಕಾಲೇಜು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.