ADVERTISEMENT

ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲವೆಂದ ಕೋಲ್ಕತ್ತ ಆಸ್ಪತ್ರೆ

ಪಿಟಿಐ
Published 30 ನವೆಂಬರ್ 2024, 4:15 IST
Last Updated 30 ನವೆಂಬರ್ 2024, 4:15 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕೋಲ್ಕತ್ತ: ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಉತ್ತರ ಕೋಲ್ಕತ್ತದ ಮಾಣಿಕ್ತಾಲಾ ಪ್ರದೇಶದ ಆಸ್ಪತ್ರೆಯೊಂದು ಶುಕ್ರವಾರ ಹೇಳಿದೆ.

ಬಾಂಗ್ಲಾದೇಶದ ಪ್ರಜೆಗಳು ಭಾರತದ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಹಾಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಎನ್ ರೇ ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

'ನಾವು ಶುಕ್ರವಾರದಿಂದ ಅನಿರ್ದಿಷ್ಟ ಸಮಯದವರೆಗೆ ಬಾಂಗ್ಲಾದೇಶದ ಯಾವುದೇ ರೋಗಿಗೆ ಚಿಕಿತ್ಸೆ ನೀಡುವುದಿಲ್ಲ. ಈ ಬಗ್ಗೆ ಆದೇಶ ಹೊರಡಿಸಿದ್ದೇವೆ' ಎಂದು ಆಸ್ಪತ್ರೆಯ ಅಧಿಕಾರಿ ಸುಭಾಂಶು ಭಕ್ತ್ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಇದರ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ನಗರದ ಇತರ ಆಸ್ಪತ್ರೆಗಳು ಇದೇ ರೀತಿಯ ನಿರ್ಧಾರ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.