ADVERTISEMENT

ಕೋಲ್ಕತ್ತ | ಹೋಟೆಲ್‌ನಲ್ಲಿ ಅಗ್ನಿ ಅವಘಡ: ಮಾಲೀಕ, ವ್ಯವಸ್ಥಾಪಕನ ಬಂಧನ

ಪಿಟಿಐ
Published 1 ಮೇ 2025, 7:38 IST
Last Updated 1 ಮೇ 2025, 7:38 IST
<div class="paragraphs"><p>ಹೊತ್ತಿ ಉರಿದ ಹೋಟೆಲ್ ಕಟ್ಟಡ</p></div>

ಹೊತ್ತಿ ಉರಿದ ಹೋಟೆಲ್ ಕಟ್ಟಡ

   

ಕೋಲ್ಕತ್ತ: ಇಲ್ಲಿನ ಹೋಟೆಲ್‌ವೊಂದರಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಹೋಟೆಲ್‌ನ ಮಾಲೀಕ ಮತ್ತು ವ್ಯವಸ್ಥಾಪಕನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಿತುರಾಜ್ ಹೋಟೆಲ್ ಮಾಲೀಕ ಆಕಾಶ್ ಚಾವ್ಲಾ ಮತ್ತು ವ್ಯವಸ್ಥಾಪಕ ಗೌರವ್ ಕಪೂರ್ ಬಂಧಿತರು.

ADVERTISEMENT

ಜೋರಾಸಂಕೊ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಹೋಟೆಲ್‌ನಲ್ಲಿ ಪತ್ತೆಯಾಗಿರುವ 14 ಮೃತದೇಹಗಳ ಪೈಕಿ 12 ಮೃತದೇಹಗಳ ಗುರುತು ಪತ್ತೆಯಾಗಿದ್ದು, ಅವುಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಉಳಿದ ಎರಡು ಮೃತದೇಹಗಳ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

42 ಕೊಠಡಿಗಳಿದ್ದ 6 ಅಂತಸ್ತಿನ ರಿತುರಾಜ್‌ ಹೋಟೆಲ್‌ನಲ್ಲಿ ಮಂಗಳವಾರ ರಾತ್ರಿ 8.10ಕ್ಕೆ ದುರ್ಘಟನೆ ಸಂಭವಿಸಿತ್ತು. ಮೃತರಲ್ಲಿ 11 ಪುರುಷರು, ಒಬ್ಬ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.