ADVERTISEMENT

ಕೋಲ್ಕತ್ತ ಅತ್ಯಾಚಾರ ಪ್ರಕರಣ: ಆರೋಪಿ ಪಾತ್ರ ದೃಢಪಡಿಸಿದ DNA ಸಾಕ್ಷ್ಯ

ಪಿಟಿಐ
Published 22 ಸೆಪ್ಟೆಂಬರ್ 2025, 15:55 IST
Last Updated 22 ಸೆಪ್ಟೆಂಬರ್ 2025, 15:55 IST
<div class="paragraphs"><p>ಡಿಎನ್‌ಎ </p></div>

ಡಿಎನ್‌ಎ

   

ಕೋಲ್ಕತ್ತ: ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ, ಪ್ರಮುಖ ಆರೋಪಿ ಮೊನೊಜಿತ್ ‘ಮ್ಯಾಂಗೊ’ ಮಿಶ್ರಾ ಪಾತ್ರವನ್ನು ಡಿಎನ್‌ಎ ವರದಿ ದೃಢಪಡಿಸಿದೆ.

ಸಂತ್ರಸ್ತೆಯ ಬಟ್ಟೆಗಳ ಮೇಲೆ ಕಂಡುಬಂದ ಮಾದರಿಗಳ ಡಿಎನ್‌ಎ ಪರೀಕ್ಷೆಯ ಫಲಿತಾಂಶ ಆರೋಪಿಗಳ ಬಟ್ಟೆಗಳಿಗೆ ಹೊಂದಿಕೆಯಾಗುತ್ತಿದೆ ಎಂದು ಕೋಲ್ಕತ್ತ ಪೊಲೀಸ್‌ ತನಿಖಾ ಅಧಿಕಾರಿಗಳು ತಮ್ಮ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಡಿಎನ್‌ಎ ಪರೀಕ್ಷೆಗಾಗಿ 24 ವರ್ಷದ ಸಂತ್ರಸ್ತೆ ಮತ್ತು ಆರೋಪಿಗಳ ರಕ್ತದ ಮಾದರಿ ತೆಗೆದುಕೊಳ್ಳಲಾಗಿತ್ತು.

ಪ್ರಕರಣದ ಪ್ರಮುಖ ಆರೋಪಿ ಮಿಶ್ರಾ ಮತ್ತು ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಇತರ ಮೂವರ ಹೆಸರನ್ನು ಅಲಿಪೋರ್‌ನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಡಿಎನ್‌ಎ ವರದಿ ಸಹ ಈ ಪ್ರಕರಣದ ಪ್ರಮುಖ ಸಾಕ್ಷ್ಯಗಳಲ್ಲಿ ಒಂದಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಲೇಜಿನ ಆವರಣದಿಂದ ವಶಪಡಿಸಿಕೊಳ್ಳಲಾದ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳು ಹಾಗೂ ಹೊರಭಾಗದ ಹತ್ತಿರದ ಎರಡು ಅಂಗಡಿಗಳ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳು ಸಹ ಅಪರಾಧವನ್ನು ದೃಢಪಡಿಸಿವೆ ಎಂದು ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಿದ್ದಾರೆ.

ಭದ್ರತಾ ಕಾವಲುಗಾರನ ಕೊಠಡಿಯೊಳಗೆ ಅತ್ಯಾಚಾರ ನಡೆದಿದ್ದು, ಈ ಸಂದರ್ಭ ಕೊಠಡಿಯ ಹೊರಭಾಗದಲ್ಲಿ ಪ್ರಮಿತ್ ಮುಖರ್ಜಿ, ಜೈಬ್‌ ಅಹ್ಮದ್‌ ಮತ್ತು ಭದ್ರತಾ ಸಿಬ್ಬಂದಿ ನಿಂತಿರುವ ವಿಡಿಯೊ ತುಣುಕು ಪೊಲೀಸರಿಗೆ ಸಿಕ್ಕಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆರೋಪಿಗಳ ಮೊಬೈಲ್‌ ಫೋನ್‌ನಿಂದ ಸಂಗ್ರಹಿಸಲಾದ ಧ್ವನಿ ಮಾದರಿಯ ಪರೀಕ್ಷಾ ವರದಿಗಾಗಿ ತನಿಖಾಧಿಕಾರಿಗಳು ಕಾಯುತ್ತಿದ್ದಾರೆ. ಈ ವರದಿ ಸಿಕ್ಕ ನಂತರ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯು, ಜೂನ್‌ 25ರಂದು ತನ್ನ ಮೇಲೆ ಹಳೆಯ ವಿದ್ಯಾರ್ಥಿ ಮತ್ತು ಇಬ್ಬರು ಹಿರಿಯ ವಿದ್ಯಾರ್ಥಿಗಳು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.