ಸಾಂದರ್ಭಿಕ ಚಿತ್ರ
ಕೋಲ್ಕತ್ತ: ಕೋಲ್ಕತ್ತದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ಮದುವೆ ಪ್ರಸ್ತಾವವನ್ನು ತಿರಸ್ಕರಿಸಿದ್ದರಿಂದ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಶನಿವಾರ ಶಂಕಿಸಿದ್ದಾರೆ.
ಈ ಘಟನೆ ಪೂರ್ವ ಯೋಜಿತವಾಗಿದೆಯೇ ಅಥವಾ ಇಲ್ಲವೇ ಎಂಬುವುದನ್ನು ತನಿಖೆಯ ಬಳಿಕ ತಿಳಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕೃತ್ಯದ ಪ್ರಮುಖ ಆರೋಪಿಯು ನನ್ನನ್ನು ಮದುವೆ ಮಾಡಿಕೊಳ್ಳುವಂತೆ ಸಂತ್ರಸ್ತೆಯನ್ನು ಬೆದರಿಸಿದ್ದಾನೆ. ಆದರೆ ಆಕೆ ತಿರಸ್ಕರಿಸಿದ್ದರು, ಹೀಗಾಗಿಯೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
'ಸಂತ್ರಸ್ತೆಯು ಆರೋಪಿಗಳಿಗೆ ತನಗೆ ಒಬ್ಬ ಗೆಳೆಯನಿದ್ದಾನೆ. ಅವನೊಂದಿಗೆ ಸಂತೋಷವಾಗಿದ್ದೇನೆ. ಅವನಿಗೆ ಮೋಸ ಮಾಡುವುದಿಲ್ಲ ಎಂಬುವುದಾಗಿ ಹೇಳಿದ್ದರು' ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುವುದು ವೈದ್ಯಕೀಯ ಪರೀಕ್ಷೆಯಿಂದ ಧೃಡಪಟ್ಟಿದೆ.
ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಮೂವರು ಆರೋಪಿಗಳು ಮತ್ತು ಸಂತ್ರಸ್ತೆಯ ದೂರವಾಣಿ ಕರೆಗಳ ವಿವರಗಳನ್ನೂ ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಜೂನ್ 25 ರಂದು ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.