ADVERTISEMENT

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ:ಸಂತ್ರಸ್ತೆ ಜತೆ ಸರ್ಕಾರ ನಿಲ್ಲುತ್ತದೆ;TMC

ಪಿಟಿಐ
Published 27 ಜೂನ್ 2025, 14:17 IST
Last Updated 27 ಜೂನ್ 2025, 14:17 IST
<div class="paragraphs"><p>ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ</p></div>

ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ

   

ಕೋಲ್ಕತ್ತ: ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಈ ಘಟನೆಯನ್ನು ಖಂಡಿಸಿದ್ದು, ಸರ್ಕಾರವು ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಜತೆ ನಿಲ್ಲುತ್ತದೆ ಎಂದು ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಶಿ ಪಂಜಾ, ಈ ಘಟನೆಯನ್ನು ರಾಜಕೀಯಗೊಳಿಸಬಾರದು.ಈ ಘಟನೆ ಅತ್ಯಂತ ನೋವಿನ ಸಂಗತಿಯಾಗಿದೆ. ಕೋಲ್ಕತ್ತ ಪೊಲೀಸರು ಈಗಾಗಲೇ ಕ್ರಮಕೈಗೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಈ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳದೇ ಆಕೆಯ ನೋವನ್ನು ಅರ್ಥೈಸಿ, ಆಕೆಯನ್ನು ಗೌರವಿಸಿ, ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. 'ಕೆಲವರು ಆರೋಪಿಗಳನ್ನು ವೈಭವೀಕರಿಸುತ್ತಾರೆ ಅಥವಾ ಅವರಿಗೆ ಹಾರ ಹಾಕುತ್ತಾರೆ. ಆದರೆ, ನಾವು ಸಿಹಿತಿಂಡಿಗಳನ್ನು ವಿತರಿಸುವುದಿಲ್ಲ ಅಥವಾ ಅಂತಹ ಜನರನ್ನು ರಕ್ಷಿಸುವುದಿಲ್ಲ. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಅಪರಾಧಿಗಳನ್ನು ಎಂದಿಗೂ ರಕ್ಷಿಸುವುದಿಲ್ಲ. ಮಹಿಳೆಯರ ಘನತೆಯ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ' ಎಂದು ವಿರೋಧ ಪಕ್ಷದ ವಿರುದ್ಧ ಪಂಜಾ ಟೀಕಾಪ್ರಹಾರ ನಡೆಸಿದ್ದಾರೆ.

'ಇಂತಹ ಸಂಕಷ್ಟದ ಸಮಯದಲ್ಲಿ ಸಂತ್ರಸ್ತೆಗೆ ಅಗತ್ಯವಿರುವ ಎಲ್ಲ ರೀತಿಯ ಬೆಂಬಲ ಮತ್ತು ಸಹಾಯವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ನ್ಯಾಯವನ್ನು ಒದಗಿಸಲಾಗುವುದು' ಎಂದು ಟಿಎಂಸಿ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.