
ಪ್ರಾತಿನಿಧಿಕ ಚಿತ್ರ
ಕೋಲ್ಕತ್ತ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಅರ್ಜಿ ನಮೂನೆ ಸಿಗದ ಕಾರಣ ಭಯಗೊಂಡು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ 27 ವರ್ಷದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ಕುಟುಂಬವು ಆರೋಪಿಸಿದೆ.
‘ಶನಿವಾರ ಆತ್ಮಹತ್ಯೆಗೆ ಯತ್ನಿಸಿದ್ದು, ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ದೇಹ ಸ್ಥಿತಿ ಗಂಭೀರವಾಗಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸರು ತಿಳಿಸಿದರು.
‘ಎಸ್‌ಐಆರ್ ಅರ್ಜಿ ನಮೂನೆಯು ಕುಟುಂಬದ ಇತರರಿಗೆ ಲಭ್ಯವಾಗಿತ್ತು. ಆಕೆಗೆ ಮಾತ್ರ ಸಿಕ್ಕಿರಲಿಲ್ಲ. ಹೀಗಾಗಿ ಆಕೆ ಒತ್ತಡಕ್ಕೆ ಒಳಗಾಗಿದ್ದಳು’ ಎಂದು ಮಹಿಳೆಯ ತಂದೆ ತಿಳಿಸಿದರು.
‘ಆಕೆಯ ಬಳಿ ಯಾವುದೇ ದಾಖಲೆಗಳು ಇರಲಿಲ್ಲ. ಹೀಗಾಗಿ ತನ್ನನ್ನು ಗಡೀಪಾರು ಮಾಡಬಹುದು ಎಂದು ಭಯಗೊಂಡಿದ್ದಳು. ಇದರಿಂದ ಕಂಗಾಲಾಗಿ ಮಗಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ’ ಎಂದು ಹೇಳಿದರು.
ಘಟನೆ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಿ ಆಸೀಮಾ ಪಾತ್ರಾ ಅವರು, ‘ಎನ್‌ಆರ್‌ಸಿ ಕುರಿತು ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಬಿಜೆಪಿಯು ಜನರಲ್ಲಿ ಭಯವನ್ನು ಹುಟ್ಟಸುತ್ತಿದೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.