ADVERTISEMENT

ಕೋಲ್ಕತ್ತ: ಕಪ್ಪು ಶಿಲೀಂಧ್ರ ಸೋಂಕಿನಿಂದ ಮಹಿಳೆ ಸಾವು

ಪಿಟಿಐ
Published 22 ಮೇ 2021, 7:04 IST
Last Updated 22 ಮೇ 2021, 7:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ: ‘ಕಪ್ಪು ಶಿಲೀಂಧ್ರ ಸೋಂಕಿನಿಂದ (ಬ್ಲ್ಯಾಕ್‌ ಫಂಗಸ್) ಬಳಲುತ್ತಿದ್ದ 32 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.

‘ಹರಿದೇವಪುರದ ನಿವಾಸಿ ಶಂಪಾ ಚಕ್ರವರ್ತಿ ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಶಂಭುನಾಥ್‌ ಪಂಡಿತ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರಲ್ಲಿ ಕಪ್ಪು ಶಿಲೀಂದ್ರ ಸೋಂಕು ಕಾಣಿಸಿಕೊಂಡಿತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಅವರು ಮೃತಪಟ್ಟರು’ ಎಂದು ಅವರು ಹೇಳಿದರು.

‘ಕಪ್ಪು ಶಿಲೀಂಧ್ರ ಪ್ರಕರಣಗಳನ್ನು ಎದುರಿಸಲು ಆರೋಗ್ಯ ಇಲಾಖೆಯು ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ‌ದ್ಯ, ಈ ಸೋಂಕಿನಿಂದ ಬಳಲುತ್ತಿರುವ ಐದು ರೋಗಿಗಳು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರೋಗಿಗಳು ಬಿಹಾರ ಮತ್ತು ಜಾರ್ಖಂಡ ರಾಜ್ಯದವರಾಗಿದ್ದಾರೆ’ ಎಂದು ಆಸ್ಪತ್ರೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.