ADVERTISEMENT

ಕೇರಳದ ಕೊಟ್ಟಾಯಂ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕುಸಿತ: ಮಹಿಳೆ ಸಾವು

ಕಟ್ಟಡ ಕುಸಿದರೂ 2 ಗಂಟೆಗೂ ಹೆಚ್ಚು ನಿಧಾನವಾಗಿ ಪರಿಹಾರ ಕಾರ್ಯಾಚರಣೆ ಆರಂಭವಾಗಿದ್ದಕ್ಕೆ ಮಹಿಳೆ ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಪಿಟಿಐ
Published 4 ಜುಲೈ 2025, 6:05 IST
Last Updated 4 ಜುಲೈ 2025, 6:05 IST
<div class="paragraphs"><p>ಕೇರಳದ ಕೊಟ್ಟಾಯಂ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕುಸಿತ</p></div>

ಕೇರಳದ ಕೊಟ್ಟಾಯಂ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕುಸಿತ

   

ಕೊಟ್ಟಾಯಂ: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂಧು (52) ಎಂದು ಗುರುತಿಸಲಾಗಿದೆ. ಅಲೀನಾ (11), ಅಮಲ್ ಪ್ರದೀಪ್ (20) ಜಿನು ಸಾಜಿ (38) ಗಾಯಾಳುಗಳು. ಸದ್ಯ ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಾಲಕಿ ಅಲಿನಾ ಹಾಗೂ ಜಿನು ಸಾಜಿ ಅವರ ಪರಿಸ್ಥಿತಿ ಗಂಭೀರವಾಗಿದೆ.

ADVERTISEMENT

ಬಿಂಧು ಅವರು ಮೊಮ್ಮಗಳು ಅಲೀನಾ ಅಪಘಾತವೊಂದರಲ್ಲಿ ಗಾಯಗೊಂಡಿದ್ದಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದೇ ವೇಳೆ ಅಮಲ್ ಪ್ರದೀಪ್, ಜಿನು ಸಾಜಿ ಎಂಬುವರು ಅದೇ ಕಟ್ಟಡದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡ (ವಾರ್ಡುಗಳಿಗೆ ಹೊಂದಿಕೊಂಡಿದ್ದ ಟಾಯ್ಲೆಟ್ ಕಾಂಪ್ಲೆಕ್ಸ್‌) ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಕುಸಿದ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡ ಕುಸಿದರೂ 2 ಗಂಟೆಗೂ ಹೆಚ್ಚು ನಿಧಾನವಾಗಿ ಪರಿಹಾರ ಕಾರ್ಯಾಚರಣೆ ಆರಂಭವಾಗಿದ್ದಕ್ಕೆ ಬಿಂಧು ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಘಟನೆಯನ್ನು ಖಂಡಿಸಿ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.

ಕಟ್ಟಡ ಕುಸಿದ ಸ್ಥಳಕ್ಕೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ದೌಡಾಯಿಸಿ ಪರಿಹಾರ ಕಾರ್ಯಾಚರಣೆ ಬಿರುಸುಗೊಳಿಸುವಂತೆ ಆದೇಶಿಸಿದ್ದರು. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.