ADVERTISEMENT

ಕೋಯಿಕ್ಕೋಡ್ ವಿಮಾನ ದುರಂತ: 85 ಮಂದಿ ಆಸ್ಪತ್ರೆಯಿಂದ ಮನೆಗೆ

ಪಿಟಿಐ
Published 12 ಆಗಸ್ಟ್ 2020, 8:29 IST
Last Updated 12 ಆಗಸ್ಟ್ 2020, 8:29 IST
ಕೊಯಿಕ್ಕೋಡ್ ವಿಮಾನ ದುರಂತ ಗಾಯಗೊಂಡ ಪ್ರಯಾಣಿಕರೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು –ಎಎಫ್‌ಪಿ ಚಿತ್ರ
ಕೊಯಿಕ್ಕೋಡ್ ವಿಮಾನ ದುರಂತ ಗಾಯಗೊಂಡ ಪ್ರಯಾಣಿಕರೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು –ಎಎಫ್‌ಪಿ ಚಿತ್ರ   

ನವದೆಹಲಿ: ಕೇರಳದ ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್‌ 7ರಂದು ಸಂಭವಿಸಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ದುರಂತದಲ್ಲಿ ಗಾಯಗೊಂಡಿದ್ದ 85 ಪ್ರಯಾಣಿಕರು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಏರ್ ‌ಇಂಡಿಯಾ ಎಕ್ಸ್‌ಪ್ರೆಸ್‌ ಬುಧವಾರ ತಿಳಿಸಿದೆ.

‘ವಿಮಾನ ದುರಂತದಲ್ಲಿ ಗಾಯಗೊಂಡಿದ್ದ 149 ಮಂದಿಯನ್ನು ಚಿಕಿತ್ಸೆಗೆಂದು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿತ್ತು. ಈವರೆಗೆ 85 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ’ ಎಂದುನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಹೇಳಿಕೆ ನೀಡಿದ್ದಾರೆ.

ದುಬೈನಿಂದ ಕೋಯಿಕ್ಕೋಡ್‌ಗೆ 190 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಶುಕ್ರವಾರ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿತ್ತು. ಈ ದುರಂತದಲ್ಲಿ 18 ಮಂದಿ ಮೃತಪಟ್ಟಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.