ADVERTISEMENT

ಕನ್ನಡದಲ್ಲೂ ಪ್ರಶ್ನೆಪತ್ರಿಕೆ: ಪಿಣರಾಯಿ ಸಲಹೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 20:15 IST
Last Updated 16 ಸೆಪ್ಟೆಂಬರ್ 2019, 20:15 IST
   

ತಿರುವನಂತಪುರ: ಸರ್ಕಾರದ ಉನ್ನತ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆಸುವ ಪರೀಕ್ಷೆಯಲ್ಲಿ ಮಲಯಾಳ, ಕನ್ನಡ ಮತ್ತು ತಮಿಳು ಭಾಷೆಗಳಲ್ಲೂ ಪ್ರಶ್ನೆಪತ್ರಿಕೆಗಳನ್ನು ನೀಡುವಂತೆ ಕೇರಳ ಸರ್ಕಾರವು ಅಲ್ಲಿನ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಸಲಹೆ ನೀಡಿದೆ.

ಕೇರಳದಲ್ಲಿ ಪ್ರಸಕ್ತ ಇಂಗ್ಲಿಷ್‌ ಭಾಷೆಯಲ್ಲಿ ಮಾತ್ರ ಪ್ರಶ್ನೆಪತ್ರಿಕೆ ನೀಡಲಾಗುತ್ತಿದೆ. ಆದರೆ ಪದವಿಪೂರ್ವ ಮತ್ತು ಅದಕ್ಕೂ ಕಡಿಮೆ ವಿದ್ಯಾರ್ಹತೆಯ ಅಗತ್ಯವಿರುವ ಹುದ್ದೆಗಳಿಗೆ ನಡೆಸುವ ಪರೀಕ್ಷೆಗಳಲ್ಲಿ ಮಲಯಾಳ, ಕನ್ನಡ ಹಾಗೂ ತಮಿಳು ಭಾಷೆಗಳಲ್ಲೂ ಪ್ರಶ್ನೆಪತ್ರಿಕೆಗಳನ್ನು ನೀಡಲಾಗುತ್ತಿದೆ.

ಪದವಿ ವಿದ್ಯಾರ್ಹತೆಯ ಹುದ್ದೆಗಳಿಗೆ ನಡೆಸುವ ಪರೀಕ್ಷೆಗಳಲ್ಲೂ ಮಲಯಾಳ ಭಾಷೆಯಲ್ಲಿ ಪ್ರಶ್ನೆಪತ್ರಿಕೆ ನೀಡಬೇಕು ಎಂದು ರಾಜ್ಯದ ಕೆಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳ ಪ್ರತಿನಿಧಿಗಳು ಕೇರಳದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಸೋಮವಾರ ಕೆಪಿಎಸ್‌ಸಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಆ ಸಭೆಯಲ್ಲಿ ಮಲಯಾಳ ಮಾತ್ರವಲ್ಲ ಕನ್ನಡ ಮತ್ತು ತಮಿಳು ಭಾಷೆಗಳಲ್ಲೂ ಪ್ರಶ್ನೆಪತ್ರಿಕೆ ನೀಡುವಂತೆ ಅವರು ಸಲಹೆ ನೀಡಿದ್ದಾರೆ.

ADVERTISEMENT

‘ಮುಖ್ಯಮಂತ್ರಿಯವರೇ ಪ್ರಾಧಿಕಾರದ ಅಧ್ಯಕ್ಷರಾಗುವುದರಿಂದ ಅಭಿವೃದ್ಧಿಗೆ ಹೆಚ್ಚು ಅನುದಾನ ದೊರೆಯುತ್ತದೆ. ದೇವಸ್ಥಾನದ ಆದಾಯವನ್ನೂ ವ್ಯವಸ್ಥಿತವಾಗಿ ಬಳಸಲು ಸಾಧ್ಯವಾಗುತ್ತದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಕುಕ್ಕೆ ದೇವಳಕ್ಕೂ ಪ್ರಾಧಿಕಾರ ರಚಿಸುವ ಕುರಿತು ಇಲಾಖೆಯಲ್ಲಿ ಚರ್ಚೆ ಆರಂಭವಾಗಿದೆ. ಶೀಘ್ರದಲ್ಲಿಯೇ ನಿರ್ಧಾರಕ್ಕೆ ಬರಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.