ಸಾಂದರ್ಭಿಕ ಚಿತ್ರ
ಆಳಪ್ಪುಳ (ಕೇರಳ): ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸುದೈವವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಕಾಯಕ್ಕುಳಂ – ಆಳಪ್ಪುಳ ನಡುವೆ ಸಂಚರಿಸುವಾಗ ಘಟನೆ ನಡೆದಿದೆ. ಸುಟ್ಟ ವಾಸನೆ ಬಂದಿದ್ದರಿಂದ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಚಾಲಕ ಸೂಚಿಸಿದ್ದ. ಹೀಗಾಗಿ ಯಾರಿಗೂ ಗಾಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಘಟನೆಗೆ ಕಾರಣವೇನು ಎಂಬುದು ಇನ್ನಷ್ಟೇ ಪತ್ತೆ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ ಜರುಗಿದ್ದು, ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಬಸ್ ಬಹುತೇಕ ಬೆಂಕಿಗೆ ಆಹುತಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.