ADVERTISEMENT

ಅತ್ಯಾಚಾರ ಅಪರಾಧಿ ಸೆಂಗರ್‌ ಶಿಕ್ಷೆ ಅಮಾನತು: ದೆಹಲಿ ಕೋರ್ಟ್‌ ಮುಂದೆ ಪ್ರತಿಭಟನೆ

ತೀರ್ಪಿನ ಬಗ್ಗೆ ಸಂತ್ರಸ್ತೆ ತಾಯಿಯ ಅಸಮಾಧಾನ

ಪಿಟಿಐ
Published 26 ಡಿಸೆಂಬರ್ 2025, 16:11 IST
Last Updated 26 ಡಿಸೆಂಬರ್ 2025, 16:11 IST
ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿಯ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ದೆಹಲಿ ಹೈಕೋರ್ಟ್‌ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು – ಪಿಟಿಐ ಚಿತ್ರ
ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿಯ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ದೆಹಲಿ ಹೈಕೋರ್ಟ್‌ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು – ಪಿಟಿಐ ಚಿತ್ರ   

ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿಯ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಸಂತ್ರಸ್ತೆ, ಅವರ ತಾಯಿ ಮತ್ತು ಮಹಿಳಾ ಪರ ಹೋರಾಟಗಾರರು ದೆಹಲಿ ಹೈಕೋರ್ಟ್‌ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. 

ಪ್ರಕರಣದ ಅಪರಾಧಿ ಬಿಜೆಪಿ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್‌ ಸೆಂಗರ್‌ಗೆ ನೀಡಿರುವ ಜಾಮೀನನನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಾಮಾಜಿಕ ಹೋರಾಟಗಾರರಾದ ವಕೀಲೆ ಭಯನಾ ಮತ್ತು ಅಖಿಲ ಭಾರತ ಮಹಿಳಾ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ADVERTISEMENT

‘ನಾನು ಇಡೀ ಹೈಕೋರ್ಟ್‌ ಅನ್ನು ದೂಷಿಸುವುದಿಲ್ಲ. ಆದರೆ ಇಬ್ಬರು ನ್ಯಾಯಮೂರ್ತಿಗಳು ನಮ್ಮ ನಂಬಿಕೆಯನ್ನು ನುಚ್ಚು ನೂರು ಮಾಡಿದ್ದಾರೆ. ಹಿಂದಿನ ನ್ಯಾಯಮೂರ್ತಿ ಅವರು ನಮಗೆ ನ್ಯಾಯ ಒದಗಿಸಿದ್ದರು. ಆದರೆ ಈಗ ಅಪರಾಧಿಗೆ ಜಾಮೀನು ಸಿಕ್ಕಿದೆ’ ಎಂದು ಸಂತ್ರಸ್ತೆಯ ತಾಯಿ ಹೇಳಿದರು. 

‘ಅತ್ಯಾಚಾರಿಗಳು ಮತ್ತು ಅಪರಾಧಿಗಳನ್ನು ರಕ್ಷಿಸುವುದನ್ನು ನಿಲ್ಲಿಸಿ’ ಎಂಬ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದರು.

ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್‌ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ಅಮಾನತುಗೊಳಿಸಿ, ಜಾಮೀನು ನೀಡಿದೆ.

ನಾನು ‌ಹೆದರುವುದಿಲ್ಲ: ಸಂತ್ರಸ್ತೆ
‘ಅಪರಾಧಿಯ ಶಿಕ್ಷೆ ಅಮಾನತುಗೊಂಡಿರುವುದಕ್ಕೆ ನಾನು ಹೆದರುವುದಿಲ್ಲ. ಸುಪ್ರೀಂ ಕೋರ್ಟ್‌ ಮೊರೆ ಹೋಗುತ್ತೇವೆ’ ಎಂದು ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹೇಳಿದ್ದಾರೆ. ‘ದೇಶದ ಮಹಿಳೆಯರಿಗಾಗುತ್ತಿರುವ ಅನ್ಯಾಯವನ್ನು ಸಾರ್ವಜನಿಕವಾಗಿ ಪ್ರಶ್ನಿಸಲು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ನನ್ನನ್ನು ಜೈಲಿಗೆ ಹಾಕಿದರೂ ನಾನು ಹೆದರುವುದಿಲ್ಲ’ ಎಂದು ತಿಳಿಸಿದ್ದಾರೆ.
ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿಯ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ದೆಹಲಿ ಹೈಕೋರ್ಟ್‌ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು – ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.