ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದರು
–ಪಿಟಿಐ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಮೂವರು ಯೋಧರು ಗಾಯಗೊಂಡಿದ್ದಾರೆ.
ದಕ್ಷಿಣ ಕಾಶ್ಮೀರದ ಭದ್ರತಾ ಪರಿಸ್ಥಿತಿ ಹಾಗೂ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಸೇನೆಯ ಉತ್ತರ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಪರಿಶೀಲಿಸಿದರು.
ಅರಣ್ಯ ಪ್ರದೇಶದ ದುರ್ಗಮ ಸ್ಥಳಗಳಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಡ್ರೋನ್ ಹಾಗೂ ಹೆಲಿಕಾಪ್ಟರ್‌ಗಳು ಸೇರಿದಂತೆ ಎಲ್ಲ ವಿಧಾನಗಳನ್ನೂ ಬಳಸುತ್ತಿವೆ ಎಂದು ಪ್ರತೀಕ್ ಶರ್ಮಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.