ADVERTISEMENT

ಉಗ್ರರ ವಿರುದ್ಧ ಕಾರ್ಯಾಚರಣೆ: ಮೂವರು ಉಗ್ರರು ಹತ, ಪೊಲೀಸ್ ಅಧಿಕಾರಿ ಹುತಾತ್ಮ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2019, 13:47 IST
Last Updated 24 ಫೆಬ್ರುವರಿ 2019, 13:47 IST
ಡಿಎಸ್‍ಪಿ ಅಮನ್ ಠಾಕೂರ್
ಡಿಎಸ್‍ಪಿ ಅಮನ್ ಠಾಕೂರ್   

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‍ಕೌಂಟರ್ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದು, ಡಿಎಸ್‍ಪಿ ಅಮನ್ ಠಾಕೂರ್ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಕಾರ್ಯಾಚರಣೆ ತಂಡ (SOG), 34 ರಾಷ್ಟ್ರೀಯ ರೈಫಲ್ಸ್ ಪಡೆ ಮತ್ತು ಪೊಲೀಸರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರುಹೇಳಿದ್ದಾರೆ.

ಉಗ್ರರು ಭದ್ರತಾ ಪಡೆಯ ಮೇಲೆ ಮೊದಲು ಗುಂಡು ಹಾರಿಸಿದ್ದು ಇದಕ್ಕೆ ಭದ್ರತಾ ಪಡೆ ಪ್ರತಿದಾಳಿ ನಡೆಸಿತ್ತು.

ADVERTISEMENT

ಮೇಜರ್ ಮತ್ತು ಓರ್ವ ಯೋಧ ಈ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದಾರೆ ಎಂದು ಸೇನೆಯ ಮೂಲಗಳು ಹೇಳಿವೆ.

ಈ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.